ಗುರಿ ತಲುಪಲು ಗುರು ಮುಖ್ಯ

teachers
ಕಾರ್ಕಳದ ಕ್ರಿಯೇಟಿವ್ ಕಾಲೇಜು ಸಪ್ತಸ್ವರ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮ ನಡೆಯಿತು
Published on

ಕಾರ್ಕಳ: ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಒಬ್ಬ ಗುರುವಿಗೆ ನೀಡುತ್ತಾರೆ. ಶಿಕ್ಷಣದ ಮೂಲಾರ್ಥ ತಿಳಿಸಿ ವ್ಯಕ್ತಿಯ ಬದುಕು ಬೆಳಗುವವರು ಶಿಕ್ಷಕರು ಎಂದು ನಲ್ಲೂರು ಪರಪ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಿವೃತ್ತ ಮುಖ್ಯ ಶಿಕ್ಷಕಿ ಪೂರ್ಣಿಮಾ ರಮೇಶ್ ಶೆಣೈ ಹೇಳಿದರು.

ಕಾರ್ಕಳದ ಕ್ರಿಯೇಟಿವ್ ಕಾಲೇಜು ಸಪ್ತಸ್ವರ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮದಲ್ಲಿ ಡಾ.ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಿದರು.

ಬೈಲೂರು ಹೊಸ ಬೆಳಕು ಸಂಸ್ಥೆ ವ್ಯವಸ್ಥಾಪಕ ತನುಲಾ ತರುಣ್ ಮಾತನಾಡಿ, ಗುರುವಿಲ್ಲದೆ ಗುರಿಯನ್ನು ತಲುಪುವುದು ಕಷ್ಟ. ಭರವಸೆ ಹೆಚ್ಚಿಸುವ, ಕನಸನ್ನು ಸಾಕಾರಗೊಳಿಸುವ, ಕಲಿಕಾ ಆಸಕ್ತಿ ಹುಟ್ಟು ಹಾಕುವ ಸೂತ್ರಧಾರನೇ ಶಿಕ್ಷಕ ಎಂದರು.

ಪ್ರಾಂಶುಪಾಲ ಗಣಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಸಹ ಸಂಸ್ಥಾಪಕ ಅಶ್ವತ್ ಎಸ್.ಎಲ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಶಿವಕುಮಾರ್, ವೃಂದಾ ದಾತೆ, ಗಿರೀಶ್ ಭಟ್, ಶ್ರೀನಿಧಿ ಎಸ್.ನಾಯಕ್ ಸನ್ಮಾನ ಪತ್ರ ವಾಚಿಸಿದರು. ಸಂಸ್ಥಾಪಕರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಹಿಂದಿ ಭಾಷಾ ಮುಖ್ಯಸ್ಥ ವಿನಾಯಕ ಜೋಗ್ ಸ್ವಾಗತಿಸಿದರು. ಉಪನ್ಯಾಸಕ ಲೋಹಿತ್ ಎಸ್.ಕೆ. ವಂದಿಸಿದರು. ಪ್ರಿಯಾಂಕ ತೀರ್ಥರಾಮ ನಿರೂಪಿಸಿದರು.

ಪುಸ್ತಕ ಹಸ್ತಾಂತರ, ಸನ್ಮಾನ

ಆಂಗ್ಲ ಭಾಷಾ ಮುಖ್ಯಸ್ಥ ರಾಜೇಶ್ ಶೆಟ್ಟಿ, ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್ ಅವರನ್ನು ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು. 2023ನೇ ಸಾಲಿನ ಶೈಕ್ಷಣಿಕ ವರ್ಷದ ಸಾಧಕ ವಿದ್ಯಾರ್ಥಿಗಳಾದ ಅಭಯ ಎಸ್.ಎಸ್., ಕಾರ್ತಿಕ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಹೊಸಬೆಳಕು ಸಂಸ್ಥೆಗೆ ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ 5,000 ರೂ. ಮೌಲ್ಯದ ಪುಸ್ತಕ ಹಸ್ತಾಂತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net