ಕಾರ್ಯದರ್ಶಿಯಾಗಿ ಗುರುಸ್ವಾಮಿ ನೇಮಕ

28 HANUR 1
ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಯಾಗಿ ನೇಮಕಗೊಂಡ ಗುರುಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಷಡಾಕ್ಷರಿ ಆದೇಶ ಪ್ರತಿ ಹಸ್ತಾಂತರಿಸಿದರು.
Published on

ಹನೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಯಾಗಿ ಹನೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಅವರನ್ನು ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ನಾಮ ನಿರ್ದೇಶನ ಮಾಡಿ ಆದೇಶಿಸಿದ್ದಾರೆ.

ಗುರುಸ್ವಾಮಿ ಅವರು ಪ್ರಸ್ತುತ ಹನೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ 5 ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ 2 ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಜತೆಗೆ 2019-24ರ ಅವಗೆ ನಡೆದ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಜತೆಗೆ 2024-29ರ ಸಾಲಿನಲ್ಲೂ ಅಧ್ಯಕ್ಷರಾಗಿದ್ದು, ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನು ಮನಗಂಡು ರಾಜ್ಯ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಗುರುಸ್ವಾಮಿ ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಈ ಸಂಬಂಧ ವಿಜಯವಾಣಿಯೊಂದಿಗೆ ಗುರುಸ್ವಾಮಿ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದೇನೆ. ಜತೆಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷನಾಗಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗಿದ್ದು, ತೃಪ್ತಿ ತಂದಿದೆ.

ನನ್ನ ಕಾರ್ಯವೈಖರಿ ಮನಗಂಡು ರಾಜ್ಯ ಕಾರ್ಯದರ್ಶಿ ಹುದ್ದೆ ನೀಡಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆ ಬಗೆಹರಿಸಲು ಇನ್ನು ಹೆಚ್ಚಿನ ಒತ್ತು ನೀಡಲಾಗುವುದು. ಜತೆಗೆ ಸಂಘದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net