

ವಿಜಯಪುರ: ನಗರದ ಜ್ಞಾನಯೋಗಾಶ್ರಮದಲ್ಲಿ ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಸ್ಮರಣೋತ್ಸವ ಹಾಗೂ ಗುರುಪೂರ್ಣಿಮೆ ಹಿನ್ನೆಲೆ ಪೂರ್ವಭಾವಿ ಸಭೆ ಕರೆಯಲಾಗಿದೆ.
ಜು. 21ರಂದು ಗುರುಪೂರ್ಣಿಮೆ ಇದ್ದು ತನ್ನಿಮಿತ್ತ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲು ಜೂ. 7ರಂದು ಸಂಜೆ 5ಕ್ಕೆ ಆಶ್ರಮದಲ್ಲಿ ಸಭೆ ಕರೆಯಲಾಗಿದೆ. ಆಶ್ರಮದ ಭಕ್ತರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವುದರ ಜೊತೆಗೆ ಕಾರ್ಯಕ್ರಮದ ಅರ್ಥಪೂರ್ಣತೆ ಹೆಚ್ಚಿಸಲು ಶ್ರಮಿಸಬೇಕೆಂದು ಪೂಜ್ಯ ಬಸವಲಿಂಗ ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.