

ಕಾಸರಗೋಡು: ಪೆರ್ಲ ನಾಲಂದ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಾಲಂದ ಚಾರಿಟೆಬಲ್ ಟ್ರಸ್ಟ್ ಹಾಗೂ ಕಾಲೇಜು ಎನ್ನೆಸ್ಸೆಸ್ ಘಟಕದ ಜಂಟಿ ಆಶ್ರಯದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಿತು.
ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಬಳ್ಳಂಬೆಟ್ಟು ಈಶ್ವರ ಭಟ್ ಅವರಿಗೆ ಗುರುನಮನ ಸಲ್ಲಿಸಲಾಯಿತು. ಕಾಲೇಜು ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯ ರಾಜಶೇಖರ್ ಪೆರ್ಲ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ. ಸ್ವಾಗತಿಸಿದರು. ಶ್ರೀಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಎನ್ನೆಸ್ಸೆಸ್ ಸ್ವಯಂಸೇವಕಿ ಝಿನಾನ ವಂದಿಸಿದರು. ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.