ಗುರುವೀರಘಂಟೈ ಮಡಿವಾಳೇಶ್ವರರ ಜೋಡು ರಥೋತ್ಸವ

Guruveeraghantai Madivaleshwar, Jodu Rathotsava, Kalakeri, Talikoti, North Karnataka, Andhra, Maharashtra, Goa,
ಕಲಕೇರಿ ಗ್ರಾಮದ ಗುರು ವೀರಘಂಟೈ ಮಡಿವಾಳೇಶ್ವರರ ಜೋಡು ರಥೋತ್ಸವ ಸಂಭ್ರಮದಿಂದ ಜರುಗಿತು.
Published on

ಕಲಕೇರಿ: ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಗುರು ವೀರಘಂಟೈ ಮಡಿವಾಳೇಶ್ವರರ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ನಸುಕಿನ ಜಾವ 5 ಗಂಟೆಗೆ ಅಗ್ಗಿ ಉತ್ಸವ, ಸಂಜೆ 5 ಗಂಟೆಗೆ ಜೋಡು ತೇರಿನ ರಥೋತ್ಸವ ವಿಜೃಂಭಣೆಯಿಂಣ ನಡೆಯಿತು.

ವೇ.ಮಲ್ಲಯ್ಯಮುತ್ಯಾ ಗದ್ದಿಗೆಮಠ ನೇತೃತ್ವದಲ್ಲಿ ವಿವಿಧ ಪೂಜಾ ಕಾರ್ಯಗಳು ನೆರವೇರಿದವು. ಬೆಳಗ್ಗೆ 9 ಗಂಟೆಯಿಂದ ಗ್ರಾಮದ ಯುವಕರು ಪದ್ಧತಿಯಂತೆ ರಥಕ್ಕೆ ಎಣ್ಣೆ ಹಚ್ಚಿ ಸಿಂಗರಿಸಿದರು.

ಉತ್ತರ ಕರ್ನಾಟಕದ ವಿವಿಧ ಜಿಲ್ಲೆ ಹಾಗೂ ಆಂಧ್ರ, ಮಹಾರಾಷ್ಟ್ರ, ಗೋವಾದಿಂದ ಭಕ್ತರು ಆಗಮಿಸಿದ್ದರು. ಭಕ್ತರು ಪರಂಪರೆಯಂತೆ ಜೋಡು ಎಡೆ, ಜೋಡುಕೊಡೆಗಳನ್ನು ಗದ್ದುಗೆಗೆ ಸಲ್ಲಿಸಿ ಜೋಡುಗದ್ದಿಗೆ, ಜೋಡು ಕಲಶ, ಜೋಡು ರಥಗಳು, ಜೋಡು ಪಾದಗಟ್ಟಿಗೆ ಪೂಜೆಸಲ್ಲಿಸಿದರು. 2 ಸಾವಿರಕ್ಕೂ ಹೆಚ್ಚು ಭಕ್ತರು ದೀಡ್ ನಮಸ್ಕಾರ ಹಾಕಿದರು.

ಸಂಜೆ 5 ಗಂಟೆಗೆ ಎರಡೂ ರಥಗಳಿಗೆ ಪೂಜೆ ಸಲ್ಲಿಸಿದ ನಂತರ ಪಂಚರಂಗ ಸಂಸ್ಥಾನ ಗದ್ದಿಗೆಮಠದ ಗುರುಮಡಿವಾಳೇಶ್ವರ ಶಿವಾಚಾರ್ಯರ ಅಧ್ಯಕ್ಷತೆಯಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಭಕ್ತರು ರಥಗಳಿಗೆ ಉತ್ತತ್ತಿ, ಬಾಳೆಹಣ್ಣು ಹಾರಿಸಿ ನಮಿಸಿದರು. ಪಿಎಸ್‌ಐ ಸುರೇಶ ಮಂಟೂರ ನೇತೃತ್ವದಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದರು. ಕಲಕೇರಿ ಗ್ರಾಮ ಪಂಚಾಯಿತಿಯಿಂದ ಮೂಲಸೌಕರ್ಯಗಳ ವ್ಯವಸ್ಥೆ ಮಾಡಲಾಗಿತ್ತು.

ಯುವಕರು, ವಿವಿಧ ಸಂಘ ಸಂಸ್ಥೆಗಳಿಂದ ಪೊಲೀಸ್ ಠಾಣೆಯ ಮುಂಭಾಗ, ಆದರ್ಶ ನಗರ, ತಂಗಮ್ಮ ದೇಸಾಯಿ ಕಲ್ಯಾಣ ಮಂಟಪ, ಮಡಿವಾಳೇಶ್ವರ ದೇವಸ್ಥಾನದ ದಾಸೋಹದ ಮಹಾಮನೆ ಹಾಗೂ ವಿವಿಧೆಡೆ ಪ್ರಗತಿಪರ ಸಂಘಟನೆಗಳ ವತಿಯಿಂದ, ಗೆಳೆಯರ ಬಳಗದಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net