ಅಂಬಿಗರ ಚೌಡಯ್ಯನವರ ಪೀಠಕ್ಕೆ ಸಚಿವ ಪಾಟೀಲ ಭೇಟಿ

9-GTL PATIL
Published on

ಗುತ್ತಲ: ನಿಜ ಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತ್ಯುತ್ಸವಕ್ಕೆ ಜ. 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಗುತ್ತಲ ಸಮೀಪದ ನಿಜಶರಣ ಅಂಬಿಗರ ಚೌಡಯ್ಯನವರ ಪೀಠಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಪೀಠಾಧಿಪತಿ ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ನಂತರ ತುಂಗಭದ್ರಾ ನದಿಯಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಭದ್ರಾ ಜಲಾಶಯದಿಂದ ನೀರು ಬಿಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರಿಗೆ ಸೂಚಿಸಿದರು. ಶಾಂತಭೀಷ್ಮಚೌಡಯ್ಯ ಸ್ವಾಮೀಜಿ, ಶಾಸಕ ಬಸವರಾಜ ಶಿವಣ್ಣನವರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಸಂಜೀವಕುಮಾರ ನೀರಲಗಿ, ಕಾಂಗ್ರೆಸ್ ತಾಲೂಕಾಧ್ಯಕ್ಷ ಎಂ.ಎಂ. ಮೈದೂರ, ಹಾಲಪ್ಪ ನೆಗಳೂರ, ರಾಜು ಕತ್ತಿ, ಪ್ರಭು ಬಾರ್ಕಿ, ಮಂಜುನಾಥ ಯಲಿಗಾರ, ದತ್ತಾತ್ರೇಯ ಭಂಗಿ, ರಮೇಶ ಮಾಗಳ, ಸುನೀಲ ಕೆಂಗನಿಂಗಪ್ಪನವರ, ಮಾರುತಿ ಕಬ್ಬೇರ, ಆರ್.ಎಚ್. ಐರಣಿ, ಸಿಇಒ ಅಕ್ಷಯ್ ಶ್ರೀಧರ, ತಹಸೀಲ್ದಾರ್ ಶಂಕರ ಜಿ.ಎಸ್, ಹೆಚ್ಚುವರಿ ಎಸ್ಪಿ ಸಿ. ಗೋಪಾಲ್, ಡಿವೈಎಸ್ಪಿ ಎಂ.ಎಸ್. ಪಾಟೀಲ, ಸಿಪಿಐ ಸಂತೋಷ ಪವಾರ, ಪಿಎಸ್‌ಐ ಶಂಕರಗೌಡ ಪಾಟೀಲ, ಎಂ.ಡಿ. ಕಿಚಡೇರ, ಆರ್.ಎನ್. ಮಲ್ಲಾಡದ, ಕೆ. ಮಹಾಬಲೇಶಪ್ಪ, ಶ್ರೀಮಂತ ಹದಗಲ್, ಸಿ.ಬಿ. ಹೊಸಮನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net