

ಕಾರ್ಕಳ: ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಡೆದ 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸಹಪಠ್ಯೇತರ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ವಿಜೇತರಾಗಿದ್ದಾರೆ.
ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಅಲಿಷಾ ಕ್ಲಿಯಾಂತ ಬಿ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಅನುಷ್ಕಾ ಆರ್. ಖಾರ್ವಿ ದ್ವಿತೀಯ ಸ್ಥಾನ ಗಳಿಸಿ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತನ್ಮಯಿ ಭಟ್ ಜನಪದ ಗೀತೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಪ್ರಾಂಶುಪಾಲ ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.