

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಮಡಿಕೇರಿ ವಿಧಾನಸಭಾ ಕ್ಷೇತ್ರದ ಜೆಡಿ(ಎಸ್) ಸಂಭವನೀಯ ಅಭ್ಯರ್ಥಿ ನಾಪಂಡ ಮುತ್ತಪ್ಪ ಹುಟ್ಟುಹಬ್ಬ ಸಂಭ್ರಮದಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಳ್ಳಿಗದೆ ಉಡುಗೊರೆಯಾಗಿ ನೀಡಿದ್ದಾರೆ. ಮಾಗಡಿಯಲ್ಲಿ ಆಯೋಜಿಸಿದ್ದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವಿಶೇಷ ಉಡುಗೊರೆ ನೀಡಲಾಗಿದೆ.
ಕನ್ನಡ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಎಚ್.ಡಿ. ಕುಮಾರಸ್ವಾಮಿ ಅವರು ೨೦೨೩ರ ಚುನಾವಣೆಯಲ್ಲಿ ಗೆದ್ದು ಮುಂದಿನ ಮುಖ್ಯ ಮಂತ್ರಿ ಆಗಲಿ ಎಂದು ಕಾವೇರಿ ಮಾತೆಯನ್ನು ಪ್ರಾರ್ಥಿಸಿ, ಶ್ರೀ ಚೌಡೇಶ್ವರಿ ಅಮ್ಮನವರ ಚಿತ್ರ ನೀಡಲಾಯಿತು. ಹುಟ್ಟುಹಬ್ಬ ಕಾರ್ಯಕ್ರಮ ದಲ್ಲಿ ಕೊಡಗಿನಿಂದ ಜೆಡಿ(ಎಸ್) ಮುಖಂಡರಾದ ನಾಪಂಡ ಮುದ್ದಪ್ಪ, ತ್ರಿನೇಶ್, ಸರ್ಕಲ್ ಮಂಜ ಮತ್ತಿತರರು ಇದ್ದರು.