ವಿದ್ಯುತ್ ದರ ಏರಿಕೆ ಬರೆ ಬೇಡ, ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

H D Kumaraswamy
H D Kumaraswamy
Published on

ಬೆಂಗಳೂರು : ಕರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರೊನಾ ಸೋಂಕು ಹರಡಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಹೇಳಿದ್ದಾರೆ.

ಪ್ರತಿ ಯೂನಿಟ್‌ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net