ಎಚ್​ಡಿಕೆ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಅಡ್ಡಿ; ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

JDS CONGRESS
Published on

ತುಮಕೂರು: ಶಿರಾ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ತಾಲೂಕಿನ ಬ್ರಹ್ಮಸಂದ್ರ ಗ್ರಾಮಕ್ಕೆ ಪ್ರಚಾರಕ್ಕೆಂದು ಕುಮಾರಸ್ವಾಮಿಯವರು ಆಗಮಿಸಿದ್ದರು. ಆದರೆ ಕಾಂಗ್ರೆಸ್ ಕಾರ್ಯಕರ್ತರು ಅವರ ಭಾಷಣಕ್ಕೆ ಅಡ್ಡಿಪಡಿಸಿದರು. ಇದರಿಂದ ಸ್ಥಳದಲ್ಲಿದ್ದ ಜೆಡಿಎಸ್ ಕಾರ್ಯಕರ್ತರು ಆಕ್ರೋಶಗೊಂಡರು. ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಮಾರಾಮಾರಿ ನಡೆಯಿತು.

ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿ, ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net