ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾತೇ ಅಂತಿಮ. ಅವರ ಸೂಚನೆಯನ್ನು ಕಾರ್ಯಕರ್ತರಾಗಿ ನಾವೆಲ್ಲರೂ ಪಾಲನೆ ಮಾಡುತ್ತೇವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲ ಖರ್ಗೆಯವರ ಸೂಚನೆಯಂತೆ ನಡೆದುಕೊಳ್ಳುತ್ತೇವೆ, ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಸಿಎಂ, ಅಧ್ಯಕ್ಷರ ಬದಲಾವಣೆ ಏನೇ ಇರಬಹುದು. ಅವರು ಹೇಳಿದಂತೆ ಈ ವಿಚಾರಗಳನ್ನು ನಾವು ಎಲ್ಲಿಯೂ ಮಾತನಾಡುವುದಿಲ್ಲ ಎಂದರು.
ದೆಹಲಿಯಲ್ಲಿ ಕೆಲ ದಿನಗಳ ಹಿಂದೆ ಮಹದಾಯಿಯ ಫಾರೆಸ್ಟ್ ಕ್ಲಿಯರನ್ಸ್ ಕುರಿತು ಸಭೆ ನಡೆಯಿತು. ಅಲ್ಲಿ ಏನಾದರೂ ಸಕಾರತ್ಮಕ ಉತ್ತರ ಸಿಗುವ ನಿರೀಕ್ಷೆ ಇತ್ತು. ಆದರೆ, ಯಾವ ನಿರ್ಣಯವೂ ಆಗಲಿಲ್ಲ. ಪ್ರಧಾನಿ ಮೋದಿ ಅವರು ಒಂದು ರಾಜ್ಯಕ್ಕೆ ಅನ್ಯಾಯ ಮಾಡಬಾರದು. ನಮಗೆ ಫಾರೆಸ್ಟ್ ಕ್ಲಿಯರೆನ್ಸ್ ಕೊಡಿ ಎಂದ ಸಚಿವರು ಮನವಿ ಮಾಡಿದರು.