ಎಚ್.ಎಸ್.ಸವೀತಾ ರವಿಕುಮಾರ್ ಅವಿರೋಧ ಆಯ್ಕೆ

1760615751348
ಬೆಳಗೋಳ ಗ್ರಾಪಂ ನೂತನ ಅಧ್ಯಕ್ಷರಾದ ಎಚ್.ಎಸ್. ಸವಿತಾ ರವಿಕುಮಾರ್ ಅವರನ್ನು ಅಭಿನಂದಿಸಲಾಯಿತು. ವಿಜಯಲಕ್ಷ್ಮೀ, ಬಿ.ವಿ.ಸುರೇಶ್, ರವಿಕುಮಾರ್, ಪುಟ್ಟರಾಜು ಇತರರು ಇದ್ದರು.
Published on

ಕೆ.ಆರ್.ಸಾಗರ: ಬೆಳಗೊಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಚ್.ಎಸ್.ಸವಿತಾ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿಕಟಪೂರ್ವ ಅಧ್ಯಕ್ಷ ರವಿಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಎಚ್.ಎಸ್. ಸವಿತಾ ರವಿಕುಮಾರ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ವೇಣು ಸವಿತಾ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು. ನೂತನ ಅಧ್ಯಕ್ಷರನ್ನು ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಮಾಜಿ ಅಧ್ಯಕ್ಷರಾದ ಬಿ.ವಿ.ಸುರೇಶ್, ರವಿಕುಮಾರ್, ಪುಟ್ಟರಾಜು ಸೇರಿದಂತೆ ಗ್ರಾಮದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net