ಮಕ್ಕಳ ಕ್ರೀಡಾಸಕ್ತಿಗೆ ಪ್ರೋತ್ಸಾಹ ಸಿಗಲಿ

Hadagali Sports
ಹೂವಿನಹಡಗಲಿಯ ಜಿಬಿಆರ್ ಕಾಲೇಜಿನ ಮೈದಾನದ ವಾಲಿಬಾಲ್ ಅಂಕಣದಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ವಾಲಿಬಾಲ್ ಆಡುತ್ತಿರುವುದು.
Published on

ಹೂವಿನಹಡಗಲಿ: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಸೋಲು, ಗೆಲುವುವಲ್ಲ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಪಾಲಕರು ಮಕ್ಕಳನ್ನು ಅಂಕಗಳ ಹಿಂದೆ ಓಡಿಸುತ್ತಿದ್ದಾರೆ. ಅವರಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಇದ್ದರೂ ಭಾಗವಹಿಸಲು ಬಿಡುತ್ತಿಲ್ಲ.

ಮಕ್ಕಳ ಆಸಕ್ತಿ ಕ್ಷೇತ್ರದಲ್ಲಿ ಪ್ರೋತ್ಸಾಹ ನೀಡಿದರೆ ಉತ್ತಮ ಸಾಧನೆ ಮಾಡುತ್ತಾರೆ. ಗ್ರಾಮೀಣ ಭಾಗದ ಅನೇಕ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಕ್ರೀಡೆಗೆ ನಿತ್ಯ ತಯಾರಿ ಮುಖ್ಯ ಎಂದರು.

ಪ್ರಾಚಾರ್ಯರಾದ ಎ.ಕೊಟ್ರಗೌಡ, ಕೋರಿ ಹಾಲೇಶ್, ದೈಹಿಕ ಶಿಕ್ಷಣ ಅಧೀಕ್ಷಕ ರಫೀಕ್ ಅಹಮದ್ ಖವಾಸ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎನ್.ಪಾಟೀಲ್, ಶಿಕ್ಷಕ ಸ್ವಾಮಿನಾಥ ರಾಮಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net