ಸಾಧನೆಗೆ ನಿರಂತರ ಪರಿಶ್ರಮ ಅವಶ್ಯ

Hadagali Lib
ಹೂವಿನಹಡಗಲಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಶನಿವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Published on

ಹೂವಿನಹಡಗಲಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ದಿನಪತ್ರಿಕೆಗಳನ್ನು ತಪ್ಪದೆ ಓದಬೇಕು ಎಂದು ಹಗರಿಬೊಮ್ಮನಹಳ್ಳಿಯ ಶಿಕ್ಷಕ ನವೀನ್ ಬಡಿಗೇರ್ ಹೇಳಿದರು.

ಪಟ್ಟಣದ ಸಾರ್ವಜನಿಕ ಶಾಖಾ ಗ್ರಂಥಾಲಯದಲ್ಲಿ ಗ್ರಂಥಾಲಯ ಇಲಾಖೆ ಹಾಗೂ ಸರ್ಕಾರಿ ನೌಕರರ ಸಂಘ ಶನಿವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಸ್ತುತ ಕಾಲೇಜು ದಿನಗಳಿಂದಲೇ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಕನಸು ಚಿಗುರುವುದು ಸಹಜ. ಗುರಿ ತಲುಪಲು ನಿರಂತರ ಪರಿಶ್ರಮ ಅಗತ್ಯವಿದೆ. ಸಂವಿಧಾನ ಸೇರಿದಂತೆ ಇತರ ಎಲ್ಲ ಅಂಶಗಳನ್ನು ಅಭ್ಯಾಸ ಮಾಡುವ ಮೂಲಕ ನಿರ್ದಿಷ್ಟವಾದ ವಿಷಯಗಳಲ್ಲಿ ಜ್ಞಾನ ಹೊಂದಬೇಕು ಎಂದರು.

ಶಾಖಾ ಗ್ರಂಥಾಲಯಾಧಿಕಾರಿ ಮಂಜುನಾಥ ಭೋವಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಪಿ.ಎಂ.ಅಶೋಕ್, ಗೌರವಾಧ್ಯಕ್ಷ ಅಯ್ಯನಗೌಡರ ಕೊಟ್ರಗೌಡ, ಶಿಕ್ಷಕರಾದ ಎಚ್.ಜಿ.ಪಾಟೀಲ, ಕೊಟ್ರೇಶ್ ಹೊಂಬಾಳೆ, ಚಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net