ಹಡಪದ ಸಮಾಜದಿಂದ ಪ್ರತಿಭಾ ಪುರಸ್ಕಾರ

IMG-20231126-WA0051.jpg
Published on

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಕನಕದಾಸ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ಕರ್ನಾಟಕ ರಾಜ್ಯ ಹಡಪದ ನೌಕರರ ಸಂಘ, ಧಾರವಾಡ ಜಿಲ್ಲಾ ಹಡಪದ ಸಮಾಜದ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾಥಿರ್ಗಳಿಗೆ ಪುರಸ್ಕಾರ ನೀಡಲಾಯಿತು.

ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾಥಿರ್ಗಳು, ನಿವೃತ್ತ ನೌಕರರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು, ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾಥಿರ್ಗಳಲ್ಲಿ ಉತ್ಸಾಹ ಹಾಗೂ ಸಾಧಿಸುವ ಮನೋಭಾವ ಹೆಚ್ಚಾಗಬೇಕು ಎಂದರು.

ಅಳ್ನಾವರ ತಹಸೀಲ್ದಾರ್ ಬಸವರಾಜ ಬನ್ನೆಶಿರೂರು ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ಹುಬ್ಬಳ್ಳಿಯ ಶಿವಪುತ್ರಮಠದ ಅಭಿನವ ಸಿದ್ದಾರೂಢ ಸ್ವಾಮೀಜಿ ಆಶೀರ್ವಚನ ನೀಡಿದರು. ಪತ್ರಕರ್ತ ರಂಜಾನ್ ದರ್ಗಾ ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಹಡಪದ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ಹುಲ್ಲಿಕೇರಿ, ಸಂಘಟನೆ ಪ್ರಾರಂಭವಾಗಿ ವರ್ಷವಾಗಿದೆ. ಸಮಾಜದಲ್ಲಿ ಮಾಡುವ ಕಾರ್ಯಗಳು ಮಹತ್ವರ್ಪೂಣವಾದದು, ಇದಕ್ಕೆ ಸಮಾಜದ ಹಿರಿಯರ ಮಾರ್ಗದರ್ಶನ ಉತ್ತಮವಾಗಿದೆ ಎಂದರು.

ಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಶರಣಪ್ಪ ಕೊಟಗಿ, ಬಸವರಾಜ ವಾಸನ, ಶಂಕರ ಹಡಪದ, ಸುರೇಶ ಮುಗಳಿ, ಇತರರು ಪಾಲ್ಗೊಂಡಿದ್ದರು.

ಉಪನ್ಯಾಸಕ ಗುರುನಾಥ ಹಡಪದ ಪ್ರಾಸ್ತಾವಿಕ ಮಾತನಾಡಿದರು. ಮಾಂತೇಶ ಹಡಪದ ನಿರೂಪಿಸಿದರು. ಮಂಗಳ ಗೌರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net