ಬಹುದಿನಗಳ ಕನಸು ನನಸು

21-msk-2
Published on

ಮಸ್ಕಿ: ಹಡಪದ ಸಮುದಾಯದವರ ಬಹುದಿನಗಳ ಬೇಡಿಕೆಯಾದ ಹಡಪದ ಅಭಿವೃದ್ಧಿ ನಿಗಮ ಸ್ಥಾಪನೆಯ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಬಹುದಿನಗಳ ಕನಸು ನನಸಾಗಿದೆ ಎಂದು ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಮಹಾಬಳೇಶ್ವರ ಬಳಗಾನೂರು ಹೇಳಿದರು.

ಪಟ್ಟಣದಲ್ಲಿ ಬಸವೇಶ್ವರ ಮೂರ್ತಿ ಮಾಲಾರ್ಪಣೆ ಮಾಡಿ ಸಂಭ್ರಮಾಚರಣೆ ಬಳಿಕ ಮಂಗಳವಾರ ಮಾತನಾಡಿದರು. ಸರ್ಕಾರ ಸಮುದಾಯದ ಬೇಡಿಕೆ ಈಡೇರಿಸಿದೆ. ಸಮುದಾಯದವರು ಸರ್ಕಾರದ ಸವಲತ್ತು ಪಡೆದು ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net