ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಜು.26ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಗುರುಭವನದಲ್ಲಿ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ.
ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಯು.ಬಿ. ಬಣಕಾರ, ಪ್ರಕಾಶ ಕೋಳಿವಾಡ, ಸಂಘದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ, ಇತರರು ಪಾಲ್ಗೊಳ್ಳಲಿದ್ದಾರೆ. ಹನುಮಂತಗೌಡ ಗೊಲ್ಲರ ಉಪನ್ಯಾಸ ನೀಡಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಷಣ್ಮುಖ ಕಾಯಕದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಕ್ತದಾನ ಶಿಬಿರ :
ಜು.25ರಂದು ಬೆಳಗ್ಗೆ 11 ಗಂಟೆಗೆ ಹಾನಗಲ್ಲ ರಸ್ತೆ ವೈಭವ ಲಕ್ಷ್ಮೀ ಪಾರ್ಕ್‌ನ ಬಸವಪ್ರಿಯ ಅಪ್ಪಣ್ಣ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.