

ಮಂಡ್ಯ: ಶಿವಶರಣ ಹಡಪದ ಅಪ್ಪಣ್ಣ ಅವರು ಹನ್ನೆರಡನೆಯ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರು ಎಂದು ನಗರಸಭೆಯ ಪರಿಸರ ವಿಭಾಗದ ಇಂಜಿನಿಯರ್ ರುದ್ರೇಗೌಡ ಹೇಳಿದರು.
ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸಹಯೋಗದಲ್ಲಿ ಆಯೋಜಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಅಪ್ಪಣ್ಣ ಅವರು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಸಮಾಜದಲ್ಲಿ ಸಮಾನತೆ ಸಾಧಿಸಬೇಕಾದರೆ ಮೇಲು ಕೀಳು ಎಂಬ ಅನಿಷ್ಟ ಪದ್ಧತಿಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಉದಯ್ಕುಮಾರ್, ಸಮಾಜ ಸೇವಕ ಕೆ.ಬಿ.ಶಶಿಧರ್, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಸಂದೇಶ್, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ರವಿಕುಮಾರ್, ಮಾಜಿ ಅಧ್ಯಕ್ಷ ಅಂಜನಪ್ಪ, ಮುಖಂಡರಾದ ಸ್ವಾಮಿ, ಬಸವರಾಜು, ಆರ್.ಜಯರಾಮ್ ಇತರರಿದ್ದರು.