

ಹಗರೆ: ಮಾದೀಹಳ್ಳಿ ಹೋಬಳಿ ಮಲ್ಲಾಪುರ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಹಗರೆ ಅಪ್ಪಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
16 ಸದಸ್ಯರನ್ನೊಳಗೊಂಡ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನದ ಮುಂದಿನ ಒಂದು ವರ್ಷದ ಅವಧಿಗೆ ಶನಿವಾರ ಚುನಾವಣಾ ಪ್ರಕ್ರಿಯೆ ನೆಡೆಯಿತು. ಹಗರೆ ಅಪ್ಪಯ್ಯ ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಶಕು ಹಗರೆ ಅಪ್ಪಯ್ಯಅವರ ಆಯ್ಕೆಯನ್ನು ಪ್ರಕಟಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ ಶೆಟ್ಟಿ ಹಾಜರಿದ್ದರು. ಮಾಜಿ ಅಧ್ಯಕ್ಷ ಸೂರ್ಯನಾರಾಯಣ, ಸದಸ್ಯ ಶ್ರೀನಿವಾಸ್, ರಾಜೇಗೌಡ, ಪರಮೇಶ್ವರಪ್ಪ, ರಾಮೇಗೌಡ ಇತರರಿದ್ದರು.