ಬಿಡಿಸಿಸಿ ಬ್ಯಾಂಕ್ ಶಾಖೆ ಆರಂಭಿಸಲು ಆಗ್ರಹ

130123 Tambrahalli Villagers appela BDCC
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮಸ್ಥರು ಬಿಡಿಸಿಸಿ ಬ್ಯಾಂಕ್ ನೂತನ ಶಾಖೆ ಆರಂಭಿಸುವಂತೆ ಒತ್ತಾಯಿಸಿ ಬ್ಯಾಂಕ್ ಸಿಇಒ ಹರೀಶ್‌ಗೆ ಮನವಿ ಸಲ್ಲಿಸಿದರು.
Published on

ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಬಿಡಿಸಿಸಿ ಬ್ಯಾಂಕಿನ ನೂತನ ಶಾಖೆ ಆರಂಭಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಹೊಸಪೇಟೆ ಜಿಲ್ಲಾ ಬಿಡಿಸಿಸಿ ಬ್ಯಾಂಕಿನ ಸಿಇಒ ಹರೀಶ್‌ಗೆ ಮನವಿ ಸಲ್ಲಿಸಿದರು.

ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್ ಮಾತನಾಡಿ, ತಂಬ್ರಹಳ್ಳಿ ಗ್ರಾಮವೂ ಹೋಬಳಿಯಾಗಿದೆ. ಇದರ ವ್ಯಾಪ್ತಿಯಲ್ಲಿ 26ಕ್ಕೂ ಹೆಚ್ಚು ಹಳ್ಳಿಗಳು ಬರುತ್ತವೆ. ಮುಖ್ಯ ಕೇಂದ್ರ ಸ್ಥಾನವಾಗಿರುವ ಇಲ್ಲಿ ನಾಡಕಚೇರಿ, ಕೃಷಿ ಉತ್ಪನ್ನ ಮಾರುಕಟ್ಟೆ, ಪದವಿ ಪೂರ್ವ ಕಾಲೇಜು, ಪ್ರಾಥಮಿಕ ಆರೋಗ್ಯ ಕೇಂದ್ರ, ಎರಡು ಪೆಟ್ರೋಲ್ ಬಂಕ್‌ಗಳು ಕಾರ್ಯನಿರ್ವಸುತ್ತಿದ್ದು, ವ್ಯಾಪಾರ ವಹಿವಾಟು ಉತ್ತಮವಾಗಿದೆ. ಆದ್ದರಿಂದ, ತಂಬ್ರಹಳ್ಳಿ ಗ್ರಾಮದಲ್ಲಿ ನೂತನ ಬಿಡಿಸಿಸಿ ಬ್ಯಾಂಕ್ ಶಾಖೆ ತೆರೆದು ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ತಾಪಂ ಮಾಜಿ ಸದಸ್ಯ ಪಿ.ಕೊಟ್ರೇಶ್, ಗ್ರಾಪಂ ಸದಸ್ಯ ಮೈಲಾರ ಶಿವಕುಮಾರ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ರೆಡ್ಡಿ ಮಂಜುನಾಥ ಪಾಟೀಲ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಪಟ್ಟಣಶೆಟ್ಟಿ ಸುರೇಶ, ಪ್ರಮುಖರಾದ ಡಿ.ಎಂ.ತೋಟಯ್ಯ, ವೈ.ಕೆ.ಶ್ರೀನಿವಾಸ, ರಾಜಸಾಹೇಬ್, ಖಾದರ್‌ಸಾಬ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net