ಬಿಜೆಪಿಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ

Untitled design(11)
ಹಗರಿಬೊಮ್ಮನಹಳ್ಳಿ ಬಿಜೆಪಿ ನಗರ ಘಟಕದ ಪದಾಧಿಕಾರಿಗಳ ಏರ್ಪಡಿಸಿದ್ದ ಕಾರ್ಯಾಗಾರಕ್ಕೆ ಗಣ್ಯರು ಚಾಲನೆ ನೀಡಿದರು. ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಭದ್ರವಡಿ ಚಂದ್ರಶೇಖರ, ತಾಲೂಕು ಅಧ್ಯಕ್ಷ ಪ್ರಕಾಶ ಬೆಣಕಲ್ಲು, ನಗರ ಘಟಕದ ಅಧ್ಯಕ್ಷ ಮಂಜುನಾಥ ಹಿರೇಮಠ್ ಇತರರಿದ್ದರು.
Published on

ಹಗರಿಬೊಮ್ಮನಹಳ್ಳಿ: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನಗಳ ಸಿಗಲಿವೆ ಎಂದು ಬಿಜೆಪಿ ವಿಜಯನಗರ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ ಅಭಿಮತ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಖಾಸಗಿ ಫಾರ್ಮ್‌ಂ ಹೌಸ್‌ನಲ್ಲಿ ಗುರುವಾರ ಸಂಜೆ ಬಿಜೆಪಿ ನಗರ ಘಟಕದ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಸಭೆಯಲ್ಲಿ ಮಾತನಾಡಿದರು.

ಬೇರೆ ಪಕ್ಷಗಳಲ್ಲಿ ಕುಟುಂಬ ಸಂಸ್ಕೃತಿ ಇದೆ. ಆದರೆ, ಬಿಜೆಪಿಯಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಸ್ಥಾನಮಾನಗಳ ದೊರೆಯಲಿವೆ. ಇನ್ನು ದೇಶದತ್ತ ಪ್ರಪಂಚವೇ ತಿರುಗಿ ನೋಡುವಂತೆ ಮಾಡಿದ ನರೇಂದ್ರ ಮೋದಿ ಅವರು ಜನಪರ ಯೋಜನೆಗಳು, ಕೃಷಿಗೆ, ವಿಜ್ಞಾನಕ್ಕೆ, ಶಿಕ್ಷಣಕ್ಕೆ ಹೀಗೆ ಪ್ರಾಮುಖ್ಯತೆ ನೀಡುವ ಮೂಲಕ ಸಾರ್ವಜನಿಕರ ಜೀವನಕ್ಕೆ ಹತ್ತಿರವಾಗುವ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ನಗರ ಘಟಕದ ಅಧ್ಯಕ್ಷ ಮಂಜುನಾಥ ಹಿರೇಮಠ್ ಪ್ರಾಸ್ತಾವಿಕವಾಗಿ ಮಾತನಾಡಿ, ಪಕ್ಷ ಸಂಘಟನೆಯ ವಿಚಾರದಲ್ಲಿ ಪದಾಧಿಕಾರಿಗಳು ಒಗ್ಗಟ್ಟು ಪ್ರದರ್ಶನ ಮುಖ್ಯ. ಪಕ್ಷದಲ್ಲಿ ಯಾರು ಹೆಚ್ಚಲ್ಲ, ಯಾರು ಕಿರಿಯರಲ್ಲ. ಸಮಾನತೆಯಿಂದ ಪಕ್ಷ ಸಂಘಟಿಸುವಂತ ಕೆಲಸವಾಗಬೇಕು. ನೀಡಿರುವ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು. ನಗರದಲ್ಲಿ ಒಟ್ಟು 35 ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಅವರನ್ನು ಸೆಳೆಯುವಂತ ಕೆಲಸವಾಗಬೇಕು ಎಂದರು.ಪಕ್ಷದ ತಾಲೂಕು ಅಧ್ಯಕ್ಷ ಬೆಣಕಲ್ಲು ಪ್ರಕಾಶ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಭದ್ರವಡಿ ಚಂದ್ರಶೇಖರ, ಮಂಡಲ ಉಪಾಧ್ಯಕ್ಷ ನೆರೆಗಲ್ ಮಲ್ಲಿಕರ್ಜುನ ಹಾಗೂ ಪುರಸಭೆ ಸದಸ್ಯ ಜೋಗಿ ಹನುಮಂತಪ್ಪ, ಕೆ.ಹನುಮಂತಪ್ಪ, ವಿ.ಕನಕಪ್ಪ, ಮಂಡಲ ಪ್ರಧಾನ ಕಾರ್ಯದರ್ಶಿ ದಿವಾಕರಗೌಡ, ನಾಗರಾಜ ಸಾಲ್ಮನಿ, ಎ.ಸಂತೋಷ, ಮರಿಯಪ್ಪ, ಕಾಳೇಶ, ಮಲ್ಲಯ್ಯ, ಬ್ಯಾಟಿ ಸಂದೀಪ, ಯುವರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net