ಫಲಿತಾಂಶ ಸುಧಾರಣೆಗೆ ಸಾಂಘಿಕ ಪ್ರಯತ್ನ ಮುಖ್ಯ

news list
ಹಗರಿಬೊಮ್ಮನಹಳ್ಳಿಯ ಗುರುಭವನದಲ್ಲಿ ಮಂಗಳವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಕಾರ್ಯಾಗಾರದಲ್ಲಿ ಜಿ.ಪಂ. ಸಿಇಒ ಸದಾಶಿವ ಬಿ.ಪ್ರಭು ಮಾತನಾಡಿದರು.
Published on

ಹಗರಿಬೊಮ್ಮನಹಳ್ಳಿ: ಜಿಲ್ಲೆಯಲ್ಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಇದು ಪ್ರಥಮ ಹೆಜ್ಜೆಯಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿಂದುಳಿಯುವಿಕೆಯಲ್ಲಿನ ಅಂಶಗಳನ್ನು ಗುರುತಿಸಿ ಎಂದು ಜಿ.ಪಂ. ಸಿಇಒ ಸದಾಶಿವ ಬಿ.ಪ್ರಭು ಹೇಳಿದರು.

ಪಟ್ಟಣದ ಗುರುಭವನದಲ್ಲಿ ಮಂಗಳವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಕಾರ್ಯಾಗಾರವನ್ನು ಉದ್ಧಾಟಿಸಿ ಮಾತನಾಡಿದರು.

ಸಮಾಜ, ಪೋಷಕರು, ಶಿಕ್ಷಕರು, ಇಲಾಖೆ ಸೇರಿದಂತೆ ಎಲ್ಲರೂ ಪರಸ್ಪರ ಸಾಂಘಿಕ ಪ್ರಯತ್ನದಿಂದ ಮುಂದಿನ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಹೆಚ್ಚಿಸಲು ನಾವು ಪ್ರಯತ್ನಿಸಬೇಕಿದೆ. ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಒಂದು ಆತ್ಮೀಯ ಸಮಾಲೋಚನೆ ನಡೆಸಿ ವಿದ್ಯಾರ್ಥಿಯಲ್ಲಿನ ಕೀಳರಿಮೆ ಹೋಗಲಾಡಿಸಿ ಫಲಿತಾಂಶ ಹೆಚ್ಚಿಸಲು ಪೂರಕವಾದ ಅವಕಾಶವನ್ನು ಕಲ್ಪಿಸಬೇಕಿದೆ. ತರಗತಿಗಳಲ್ಲಿ ವಿದ್ಯಾರ್ಥಿ ಗುಂಪುಗಳನ್ನು ರಚಿಸಿ ಒಂದು ಆರೋಗ್ಯಕರ ಸಂವಾದ ಏರ್ಪಡಿಸಿ ಸ್ಪರ್ಧಾತ್ಮಕ ಮನೋಭಾವವನ್ನು ಮೂಡಿಸಿ. ಕಲಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿ. ಫಲಿತಾಂಶ ಸುಧಾರಣೆಗೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net