

ಹಗರಿಬೊಮ್ಮನಹಳ್ಳಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಕಷ್ಟು ಅನುಕೂಲವಾಗಿವೆ. ಪ್ರತಿಯೊಬ್ಬರಿಗೂ ಯೋಜನೆಗಳು ತಲುಪಿಸುವುದು ಸರ್ಕಾರದ ಗುರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಸೊನ್ನದ್ ಗುರುಬಸವರಾಜ ಹೇಳಿದರು.
ತಾಲೂಕಿನ ತಂಬ್ರಹಳ್ಳಿಯಲ್ಲಿ ಗ್ರಾಪಂ ಗೋದಾಮಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಂಚ ಯೋಜನೆಗಳ ಮಾಸಾಚರಣೆ ನಿಮಿತ್ತ ‘ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿ ಕಡೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರನ್ನು ಸ್ವಾವಲಂಬನೆ ಮಾಡುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಪಕ್ಷದ ಯೋಜನೆಗಳನ್ನೇ ಬೇರೆ ಪಾರ್ಟಿ ಅವರು ನಕಲು ಮಾಡುತ್ತಿದ್ದಾರೆ. ಕಾಂಗ್ರೆಸ್ ನೀಡಿರುವ ಯೋಜನೆಗಳು ಬೇರೆ ಯಾವ ಪಕ್ಷದವರಿಂದ ನೀಡಲು ಸಾಧ್ಯವಿಲ್ಲ ಎಂದರು.
ತಾಪಂ ಇಒ.ಡಾ.ಪರಮೇಶ್ವರಪ್ಪ ಮಾತನಾಡಿ, ಒಂದೊಂದು ಯೋಜನೆಯಲ್ಲಿ 50 ಸಾವಿರದಿಂದ 5 ಲಕ್ಷದವರೆಗೂ ಫಲಾನುಭವಿಗಳಿದ್ದಾರೆ. ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತದೆ. ಆಯಾ ಪಂಚಾಯಿತಿ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಫಲಾನುಭವಿಗಳೊಂದಿಗೆ ಸಮಾಲೋಚನೆ ಸಭೆ ನಡೆಸಲಾಗುತ್ತದೆ ಎಂದರು. ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ ಮಾತನಾಡಿದರು.
ಗ್ರಾಪಂ ಸದಸ್ಯ ಸಂಡೂರು ಮೆಹಬೂಬ್ ವಾರ್ಡ್‌ನ 7 ಜನರಿಗೆ ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿರುವ ಬಗ್ಗೆ ಗಮನ ಸೆಳೆದರು. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಗೌರಜ್ಜನವರ ಗಿರೀಶ್, ವೆಂಕಟೇಶ, ರಾಘವೇಂದ್ರ, ಪರಶುರಾಮ, ರಾಮಣ್ಣ, ಉಡುಪಿ ದೊಡ್ಡಬಸಪ್ಪ, ಗ್ರಾಪಂ ಸದಸ್ಯರಾದ ಮೈಲಾರ ಶಿವಕುಮಾರ್, ಬಣಕಾರ ಬಸಮ್ಮ, ಕೆ.ಸಲಿಮಾಬೇಗಂ, ಕಮಲಾಕ್ಷಿ ಸಪ್ಪರದ, ತಾಪಂ ಮಾಜಿ ಸದಸ್ಯ ಪಿ.ಕೊಟ್ರೇಶ್, ಪಿಎಲ್‌ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಪಟ್ಟಣಶೆಟ್ಟಿ ಸುರೇಶ್, ಸಿಡಿಪಿಒ ಬೋರೆಗೌಡ, ಪಿಡಿಒ ಕೃಷ್ಣಮೂರ್ತಿ ಇತರರಿದ್ದರು.