ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲವಿರಲಿ

hbh-1
ಹಗರಿಬೊಮ್ಮನಹಳ್ಳಿಯಲ್ಲಿ ಹಾಲುಮತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಧರ್ಮ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಶಾಸಕ ಕೆ.ನೇಮಿರಾಜ್‌ನಾಯ್ಕ ಸಸಿಗಳನ್ನು ವಿತರಿಸಿ ಚಾಲನೆ ನೀಡಿದರು. ತಿಂಥಣಿ ಬ್ರಿಡ್ಜ್ ಕನಕಗುರು ಪೀಠದ ಸಿದ್ಧರಾಮಾನಂದ ಸ್ವಾಮೀಜಿ, ನಂದಿಪುರ ಕ್ಷೇತ್ರದ ಡಾ.ಮಹೇಶ್ವರ ಸ್ವಾಮೀಜಿ, ಕುಲಗುರು ಕೊಟ್ರಯ್ಯ ಒಡೆಯರ್ ಇತರರಿದ್ದರು.
Published on

ಹಗರಿಬೊಮ್ಮನಹಳ್ಳಿ, ಹಾಲುಮತ, ಪ್ರತಿಭಾ ಪುರಸ್ಕಾರ, ಪರಿಸರ ಜಾಗೃತಿ Hagaribommanahalli, milk vote, talent award, environmental awareness

ಹಗರಿಬೊಮ್ಮನಹಳ್ಳಿ: ಬಡವರ ಪಾಲಿಗೆ ಉನ್ನತ ಶಿಕ್ಷಣ ದುಬಾರಿಯಾಗಿದ್ದು, ಅದರಲ್ಲೂ ರೈತರ ಮಕ್ಕಳಿಗೆ ಕೈಗೆಟುಕದಂತಾಗಿದೆ ಎಂದು ಶಾಸಕ ಕೆ.ನೇಮಿರಾಜ್‌ನಾಯ್ಕ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಕನ್ಯಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕುರುಬರ ಸಂಘ, ಕನಕ ನೌಕರರ ಸಂಘ ಮತ್ತು ಯುವಸೇನೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಲುಮತ ಧರ್ಮ ಮತ್ತು ಪರಿಸರ ಜಾಗೃತಿ ಯಾತ್ರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಉನ್ನತ ಶಿಕ್ಷಣ ಪಡೆಯಬೇಕೆನ್ನುವ ಹಂಬಲವೊಂದಿದ್ದರೆ ಸಾಲದು, ಸಾಧಿಸುವ ಛಲ ಕೂಡ ವಿದ್ಯಾರ್ಥಿಗಳಲ್ಲಿ ಇರಬೇಕು. ಪಟ್ಟಣದಲ್ಲಿ ಸಮುದಾಯಕ್ಕೆ ನೀವೇಶನ ದೊರೆತರೆ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮವಹಿಸುವೆ. ಕನಕ ವೃತ್ತದ ಜತೆ ಪುತ್ಥಳಿ ಕೂಡ ಸ್ಥಾಪಿಸಲಾಗುವುದು ಎಂದರು.

ತಹಸೀಲ್ದಾರ್ ಆರ್.ಕವಿತಾ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್‌ಗಳನ್ನು ದೂರವಿಟ್ಟು ಹೆಚ್ಚು ಪುಸ್ತಕಗಳನ್ನು ಓದಿ. ಉತ್ತಮ ಗುರಿ ಆಯ್ದುಕೊಂಡು ಸಾಧನೆಯತ್ತ ಮುನ್ನುಗ್ಗಿ ಎಂದು ಕಿವಿಮಾತು ಹೇಳಿದರು.

ಸಮಾಜದ ತಾಲೂಕು ಮಾಜಿ ಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿ, ನಮ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಯಾವ ಕುರುಬರ ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿಲ್ಲ. ಆದ್ದರಿಂದ ನಮಗೂ ಮೀಸಲಾತಿ ಅವಶ್ಯವಿದೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಮಾತನಾಡಿ, ಸಾಧನೆ ಎಂಬುದು ಸಾಧಕರ ಸ್ವತ್ತು. ಸಮಾಜಕ್ಕಾಗಿ ನೀವು ದೊಡ್ಡ ಕೊಡುಗೆ ನೀಡಬೇಕಿದೆ ಎಂದು ಕರೆ ನೀಡಿದರು.

ತಿಂಥಣಿ ಬ್ರಿಡ್ಜ್ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ, ನಂದಿಪುರ ಕ್ಷೇತ್ರದ ಡಾ.ಮಹೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. 80 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕುಲಗುರು ಕೊಟ್ರಯ್ಯ ಒಡೆಯರ್, ಸಮಾಜದ ತಾಲೂಕು ಅಧ್ಯಕ್ಷ ಮೈನಳ್ಳಿ ಶಿವರಾಜ್, ಕನಕ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ತಿಪ್ಪಣ್ಣ, ತಾಲೂಕು ಅಧ್ಯಕ್ಷ ಎಂ.ಮಂಜುನಾಥ, ಪ್ರಮುಖರಾದ ಬಣಕಾರ ಗೋಣೆಪ್ಪ, ಮೈಲಾರಪ್ಪ, ಟಿ.ನಿಂಗಪ್ಪ, ಪೋಟೋ ರಾಮಣ್ಣ, ಕಸಾಪ ತಾಲೂಕು ಅಧ್ಯಕ್ಷ ಗೂಳೆಪ್ಪ, ನೇತ್ರಾನಂದಪ್ಪ, ಹುಡೇದ ಹುಲುಗಪ್ಪ, ಮುಟುಗನಹಳ್ಳಿ ಹನುಮಂತ, ಜೆಡಿಎಸ್ ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಕನ್ನಿಹಳ್ಳಿ ಚಂದ್ರಶೇಖರ, ಬಿ.ಹನುಮಂತಪ್ಪ, ಸದ್ಯೋಜಾತಪ್ಪ, ಎಚ್.ಕೆ.ರಾಮು, ವಕೀಲ ಆಂಜನೇಯ, ಶಿಕ್ಷಕ ಅಂಜಿನಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net