ಕಂದಾಯ ಸೇವಾ ಸೌರಭ ಅಭಿಯಾನ

hbhalli mla nemirajnayak
ಕೆ.ನೇಮಿರಾಜ ನಾಯ್ಕ
Published on

ಹಗರಿಬೊಮ್ಮನಹಳ್ಳಿ: ಕಂದಾಯ ಇಲಾಖೆ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ತಲುಪಿಸಲು ಹಾಗೂ ಬಾಕಿ ಕಡತಗಳ ವಿಲೇವಾರಿಗೊಳಿಸಲು ಕಂದಾಯ ಸೇವಾ ಸೌರಭ ಅಭಿಯಾನ ಆಯೋಜಿಸಲಾಗಿದೆ ಎಂದು ಶಾಸಕ ಕೆ.ನೇಮಿರಾಜ ನಾಯ್ಕ ತಿಳಿಸಿದರು.

ಪಟ್ಟಣದ ಅವರ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಂದಾಯ, ಭೂ ದಾಖಲೆ ಇಲಾಖೆ, ಮುಜರಾಯಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಸೇರಿದಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಆ.9ರಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಬಾಕಿ ಉಳಿದ ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ತಾಪಂ ಸಭಾಂಗಣದಲ್ಲಿರುವ ಶಾಸಕರ ಕಚೇರಿಗೆ ಆ.8ರೊಳಗೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net