ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ

HB HALLI Pratiba Puraskara
ಹಗರಿಬೊಮ್ಮನಹಳ್ಳಿಯಲ್ಲಿ ಪಿಯು ಕಾಲೇಜು ಉಪನ್ಯಾಸಕರ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮವನ್ನು ಶಾಸಕ ಕೆ.ನೇಮಿರಾಜ ನಾಯ್ಕ ಉದ್ಘಾಟಿಸಿದರು. ಪ್ರಮುಖರಾದ ಹುಲಿಮನಿ ಗೂಳೆಪ್ಪ, ಡಾ.ಎಂ.ಕೆ.ದುರುಗಪ್ಪ, ಕೆ.ವೆಂಕಟೇಶ್, ವೈ.ಮಲ್ಲಿಕಾರ್ಜುನ, ನಾಣ್ಯಪುರ ಕೃಷ್ಣಮೂರ್ತಿ, ರಾಜು ಪಾಟೀಲ್, ಪಾಂಡುರಂಗ ನಾಯ್ಕ ಇದ್ದರು.
Published on

ಹಗರಿಬೊಮ್ಮನಹಳ್ಳಿ: ಪಿಯು ಕಾಲೇಜಿನ ಪ್ರತಿಭಾನ್ವಿತರನ್ನು ಗುರುತಿಸಿ ಸನ್ಮಾನಿಸುವುದರಿಂದ ವಿದ್ಯಾರ್ಥಿಗಳಲ್ಲಿ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಶಾಸಕ ಕೆ.ನೇಮಿರಾಜ ನಾಯ್ಕ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಪಿಯು ಕಾಲೇಜು ಉಪನ್ಯಾಸಕರ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಂದಿನ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಿ ವಿದ್ಯಾಭ್ಯಾಸ ಮಾಡಲಿದ್ದಾರೆ. ವಿದ್ಯಾರ್ಥಿಗಳು ಕಲಿಯುವ ವಯಸ್ಸಿನಲ್ಲಿ ದುಶ್ಚಟಗಳಿಗೆ ದಾಸರಾಗದೆ ವಿದ್ಯಾಭ್ಯಾಸಕ್ಕೆ ಮೊದಲ ಆದ್ಯತೆ ನೀಡಿ ಪಾಲಕರು, ಕಾಲೇಜಿಗೆ ಕೀರ್ತಿ ತರಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಟಿ.ಪಾಲಾಕ್ಷ ಮಾತನಾಡಿ, ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಲು ಉಪನ್ಯಾಸಕರು ಹೊಸ ಯೋಜನೆಗಳನ್ನು ಹಾಕಿಕೊಳ್ಳಬೇಕು ಎಂದರು.

ಉಪನ್ಯಾಸಕರ ಸಂಘದ ತಾಲೂಕು ಅಧ್ಯಕ್ಷ ಹುಲಿಮನಿ ಗೂಳೆಪ್ಪ ಮಾತನಾಡಿದರು. ಪಿಯು ಕಾಲೇಜು ಪ್ರಾಚಾರ್ಯ ಡಾ.ಎಂ.ಕೆ.ದುರುಗಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಕೆ.ವೆಂಕಟೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net