

ಹಗರಿಬೊಮ್ಮನಹಳ್ಳಿ: ತಂಬ್ರಹಳ್ಳಿಯಲ್ಲಿ ಶ್ರೀ ಬಂಡೇ ರಂಗನಾಥ ಸ್ವಾಮಿ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ರಥೋತ್ಸವ ನಿಮಿತ್ತ ಬೆಟ್ಟದಲ್ಲಿ ನೆಲೆಸಿರುವ ರಂಗನಾಥ ಸ್ವಾಮಿ ಹಾಗೂ ಲಕ್ಷ್ಮೀದೇವಿಗೆ ಪೂಜಾ ಕೈಂಕರ್ಯಗಳು ಶಾಸ್ತ್ರೋಕ್ತವಾಗಿ ನಡೆದವು. ಸಂಜೆ ಸರ್ವಾಭರಣ ಅಲಂಕೃತ ಗೊಂಡ ಉತ್ಸವ ಮೂರ್ತಿಯನ್ನು ಬೆಟ್ಟದಿಂದ ಕೆಳಗೆ ಮೆರವಣಿಗೆ ಮೂಲಕ ಕರೆ ತರಲಾಯಿತು. ರಥದ ಸುತ್ತಲೂ 3 ಸುತ್ತು ಪ್ರದಕ್ಷಿಣೆ ಹಾಕಿಸಿದ ಬಳಿಕ ರಥೋತ್ಸವ ಜರುಗಿತು.