ರಾಜ್ಯದಲ್ಲಿ ಮುಂದಿನ 5 ದಿನ ರಭಸ ಗಾಳಿ ಸಹಿತ ಆಲಿಕಲ್ಲು ಮಳೆ

Good rainfall in the district Mandya
Published on

ಬೆಂಗಳೂರು: ಲಕ್ಷದ್ವೀಪದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ರಾಜ್ಯದಲ್ಲಿ ಮುಂದಿನ 5 ದಿನ ರಭಸದ ಗಾಳಿಯೊಂದಿಗೆ ಬೇಸಿಗೆ ಮಳೆ ಬಿರುಸಾಗಿ ಸುರಿಯುವ ಸಾಧ್ಯತೆ ಇದೆ. ದಣ ಕರ್ನಾಟಕ ಸೇರಿ ಕೆಲ ಪ್ರದೇಶಗಳಲ್ಲಿ ಮಳೆ ಜತೆಗೆ ಗುಡುಗು ಮತ್ತು ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನದಲ್ಲಿ ಏ.3ರಿಂದ ಏ.6ರವರೆಗೆ ಹಾಗೂ ಬೆಳಗಾವಿ, ಬೀದರ್​, ಧಾರವಾಡ, ಗದಗದಲ್ಲಿ ಮುಂದಿನ 2 ದಿನ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗದಲ್ಲಿ ಏ.4ರಂದು ಗುಡುಗು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ರಾಜ್ಯದ ಕೆಲ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ ಗಾಳಿಯ ವೇಗ 30-40 ಕಿ.ಮೀ.ವೇಗದಲ್ಲಿ ಇರಲಿದ್ದು, ರಭಸದ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ಕೊಟ್ಟಿದೆ.

ಉಷ್ಣಾಂಶ ಇಳಿಕೆ: ಭಾಗಶಃ ಮೋಡ ಕವಿದ ವಾತಾವರಣ ಇರುವುದು,ಮಳೆ ಬೀಳುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ 3-4 ಡಿ.ಸೆ.ಉಷ್ಣಾಂಶ ಇಳಿಕೆಯಾಗಲಿದೆ. ಪ್ರಸ್ತುತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 37&39 ಡಿ.ಸೆ., ದಕ್ಷಿಣ ಕರ್ನಾಟಕ ಮತ್ತು ಕರಾವಳಿ ವ್ಯಾಪ್ತಿಯ ಪ್ರದೇಶಗಳಲ್ಲಿ 33-35 ಡಿ.ಸೆ. ಉಷ್ಣಾಂಶ ದಾಖಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಮುಂದಿನ 2 ದಿನ ಮೋಡ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33 ಡಿ.ಸೆ. ಮತ್ತು 20 ಡಿ.ಸೆ. ಉಷ್ಣಾಂಶ ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net