

ಉಳ್ಳಾಲ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಉಳ್ಳಾಲ ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜು ಆಗಿ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದರು.
ನ್ಯೂಪಡ್ಪು ಪ್ರೌಢಶಾಲೆ ಮೇಲ್ದರ್ಜೆಗೇರಿಸಿ ಪದವಿ ಪೂರ್ವ ಕಾಲೇಜಿಗೆ ಕಳೆದ ಸರ್ಕಾರದ ಅವಧಿಯಲ್ಲಿ ಮಂಜೂರಾತಿ ನೀಡಿರುವ ಮಾತುಗಳು ಕೇಳಿ ಬಂದಿದ್ದವು. ಕಾಲೇಜಿಗೆ ಜಮೀನು ಗುರುತಿಸುವಂತೆ ಶಿಕ್ಷಣ ಇಲಾಖೆ ಕೇಳಿಕೊಂಡ ಹಿನ್ನೆಲೆಯಲ್ಲಿ ಹರೇಕಳ ಗ್ರಾಪಂ ನ್ಯೂಪಡ್ಪು ಸಮೀಪದ ಜಮೀನು ಗುರುತಿಸಿತ್ತು. ಆದರೆ ಮುಂದೆ ಬೆಳವಣಿಗೆ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಶನಿವಾರ ಹಾಜಬ್ಬ ಮುಖ್ಯಮಂತ್ರಿಗಳನ್ನು ಭೇಟಿಯಾದರು.