

ತುಮಕೂರು: ಎಚ್‌ಎಎಲ್ ಘಟಕ ಲೋಕಾರ್ಪಣೆ ಕಾರ್ಯಕ್ರಮವು ಸರ್ಕಾರಿ ಪ್ರಾಯೋಜಿತವಾಗಿದ್ದು ಬಿಜೆಪಿ ಇದನ್ನು ಹೈಜಾಕ್ ಮಾಡಿದೆ.
ಮುಂಬುರುವ ರಾಜ್ಯ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಂಪೂರ್ಣವಾಗಿ ಲಾಭ ಪಡೆಯಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಹಾಗಾಗಿ, ಮೋದಿ ಜತೆಗೆ ವೇದಿಕೆ ಹಂಚಿಕೊಳ್ಳಲು ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು, ಎಂಎಲ್ಸಿಗಳಿಗು ಅವಕಾಶ ಒದಿಗಿಸಿ ಪ್ರಧಾನಮಂತ್ರಿ ಕಚೇರಿ (ಪಿಎಂಒ) ಕೊನೆಘಳಿಗೆಯಲ್ಲಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮೋದಿ ಭೇಟಿ ಜಿಲ್ಲಾ ಬಿಜೆಪಿಗೆ ಬೂಸ್ಟರ್ ಡೋಸ್ ಆಗುವ ಲೆಕ್ಕಾಚಾರಗಳಿವೆ.
ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ಎ.ನಾರಾಯಣಸ್ವಾಮಿ, ಸಚಿವ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ರಾಜ್ಯಸಭಾ ಸದಸ್ಯ ಜಗ್ಗೇಶ್ ಅಲ್ಲದೆ, ಜಿಲ್ಲೆಯ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಸಾಲಜಯರಾಂ, ಡಾ.ಸಿ.ಎಂ.ರಾಜೇಶ್‌ಗೌಡ, ಎಂಎಲ್ಸಿಗಳಾದ ಚಿದಾನಂದಗೌಡ, ವೈ.ಎ.ನಾರಾಯಣಸ್ವಾಮಿ ಕೂಡ ಮೋದಿ ಜತೆ ಮಿಂಚಲಿದ್ದಾರೆ.