ಮಕ್ಕಳ ವಿಕಸನಕ್ಕೆ ಬಹುವಿಧ ಚಟುವಟಿಕೆ ಮುಖ್ಯ

13,hgr1
Published on

ಹಲಗೂರು: ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳುವ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳ ಮೂಲಕ ಮಕ್ಕಳ ಪ್ರತಿಭಾ ವಿಕಸನವಾಗಬೇಕು ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಸೋಮಣ್ಣ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ಲಸ್ಟರ್ ಹಂತದ 2024-25ನೇ ಸಾಲಿನ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಭವಿಷ್ಯ ರೂಪಿಸಲು ಪಠ್ಯ ಮತ್ತು ಪಠ್ಯೇತರ ವಿಷಯದ ಬಹುವಿಧ ಚಟುವಟಿಕೆ ಮುಖ್ಯ ಎಂದು ಅವರು ತಿಳಿಸಿದರು. ಪ್ರತಿಭೆ ಮತ್ತು ಕಲೆ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಸ್ವತ್ತು. ಇದನ್ನು ಯಾರೂ ನಕಲು ಮಾಡಲು, ಅಪಹರಿಸಲು ಸಾಧ್ಯವಿಲ್ಲ. ಪ್ಯಾರಾ ಒಲಂಪಿಕ್‌ನಲ್ಲಿ ಅಂಗವಿಕಲರು ಚಿನ್ನ, ಬೆಳ್ಳಿ ಪದಕ ಗೆದ್ದು ದೇಶದ ಕೀರ್ತಿ ಹೆಚ್ಚಿಸಿದ್ದಾರೆ. ಆದ್ದರಿಂದ ಸಾಧನೆಗೆ ಯಾವುದೇ ವಿಕಲತೆ ಎಂಬುದು ಅಡ್ಡಿ ಬರುವುದಿಲ್ಲ ಎಂದು ಅವರು ಹೇಳಿದರು.
ಕರ್ನಾಟಕ ಪಬ್ಲಿಕ್ ಶಾಲೆ ಶಿಕ್ಷಕ ಪುಟ್ಟಸ್ವಾಮಿ ಮಾತನಾಡಿ, ಪಠ್ಯೇತರ ಚಟುವಟಿಕೆಗಳಿಗೆ ಶಿಕ್ಷಣ ಇಲಾಖೆ ಪ್ರಾಶಸ್ತ್ಯ ನೀಡುತ್ತಿದೆ. ಮಕ್ಕಳು ಸುಪ್ತ ಪ್ರತಿಭೆಯನ್ನು ಹೊರಹಾಕಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಗಳಲ್ಲಿ ಬೆಳಗಬೇಕು ಎಂದು ಆಶಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net