ಕಾಂಗ್ರೆಸ್ ನಾಯಕರ ಆರೋಪಕ್ಕೆ ತಲೆಕೆಡಿಸಿಕೊಳ್ಳದಿರಿ

25122021 Halappa achar
Published on

ಸಚಿವ ಹಾಲಪ್ಪ ಆಚಾರ್ ಹೇಳಿಕೆ

ಕುಕನೂರು: ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಪಪಂ ಚುನಾವಣೆ ಅಂಗವಾಗಿ ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದರು. 30 ವರ್ಷ ಅವರೇನು ಮಾಡಿದ್ದಾರೆಂದು ನೀವೇ ನೋಡಿದ್ದೀರಿ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಗೌರವ ಎಷ್ಟು ಉತ್ತುಂಗಕ್ಕೇರಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದಿದೆ ಎಂದರು.

ಸಂಸದ ಸಂಗಣ್ಣ ಕರಡಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಖಾನಾಪುರ ಮೇಲ್ಸೇತುವೆ ಕಾಮಗಾರಿ ಎರಡು ತಿಂಗಳಲ್ಲಿ ಮುಗಿಯಲಿದೆ. ಸ್ವಾತಂತ್ರೃ ಬಂದು 70 ವರ್ಷವಾದರೂ ಕುಕನೂರಿನಲ್ಲಿ ಒಂದೂ ಸರ್ಕಾರಿ ಪಿಯು, ಪದವಿ ಕಾಲೇಜು ಇರಲಿಲ್ಲ. ನಾಲ್ಕಾರು ಪ್ರವಾಸಿ ಮಂದಿರ ಕಟ್ಟಿಸುವುದು ಅಭಿವೃದ್ಧಿಯಲ್ಲ. ರೈತರ ಹೊಲಗಳಿಗೆ ನೀರುಣಿಸುವುದು ಅಭಿವೃದ್ಧಿ. ಅದನ್ನು ನಾನು ಮಾಡಿ ತೋರಿಸುತ್ತೇನೆಂದು ಮಾಜಿ ಸಚಿವ ಬಸವರಾಜ ರಾಯರಡ್ಡಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಸಂಸದ ಸಂಗಣ್ಣ ಕರಡಿ ಮಾತನಾಡಿ, ಪ್ರಧಾನಿ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಹಾಲಪ್ಪ ಆಚಾರ್ ಅಭಿವೃದ್ಧಿ ಚಿಂತನೆಗೆ ಮತ ನೀಡಿ ಎಂದು ಮನವಿ ಮಾಡಿದರು. ವಿವಿಧ ಮುಖಂಡರು, ಪದಾಧಿಕಾರಿಗಳು, ಅಭ್ಯರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net