ಹಳಿಯಾಳ ಕಬ್ಬು ಬೆಳೆಗಾರರ ಪ್ರತಿಭಟನೆ‌

Farmers strike
Published on

ಹಳಿಯಾಳ: ಲಗಾಣಿ ವಸೂಲಾತಿ ವಿರೋಧಿಸಿ ಕಬ್ಬು ಬೆಳೆಗಾರರ ಸಂಗಹದ ಸದಸ್ಯರು ಗುರುವಾರ ತಹಸೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.

ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಶಂಕರ ಕಾಜಗಾರ, ರೈತ ಮುಖಂಡ ನಾಗೇಂದ್ರ ಜಿವೋಜಿ ನೇತೃಯ್ವದಲ್ಲಿ ಸೇರಿದ ನೂರಾರು ರೈತರು, ಇಐಡಿ ಪ್ಯಾರಿ ಕಾರ್ಖಾನೆಯ ವಿರುದ್ಧ ಘೋಷಣೆ ಕೂಗಿದರು. ತಾಲೂಕು ಆಡಳಿತ ಕಾರ್ಖಾನೆ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.

ಕಬ್ಬನ್ನು ಬೇರೆ ಕಂಪನಿಗಳಿಗೆ ಮಾರಾಟ ಮಾಡುವಂತಿಲ್ಲ ಎಂದು ಹಳಿಯಾಳ ಸಕ್ಕರೆ ಕಾರ್ಖಾನೆಯು ಆಯುಕ್ತರ ಆದೇಶ ಹಂಚಿಕೊಂಡ ಬಗ್ಗೆ ಆಕ್ಷೇಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net