ಸರ್ಕಾರಿ ಕಾಲೇಜ್‌ನಲ್ಲಿ ಬಿಸಿಎ ಕೋರ್ಸ್ ಪ್ರಾರಂಭ

hly degree college
Published on

ಹಳಿಯಾಳ: ದಾಂಡೇಲಿ ಮತ್ತು ಹಳಿಯಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಬಿಸಿಎ ಕೋರ್ಸ್ ಪ್ರಾರಂಭಿಸಲಾಗುತ್ತಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ. ಹಳಿಯಾಳ ಮತ್ತು ದಾಂಡೇಲಿ ಭಾಗದಲ್ಲಿ ಹೆಚ್ಚಿರುವ ಗ್ರಾಮೀಣ ವಿದ್ಯಾರ್ಥಿಗಳು ಬಿಸಿಎ ಕೋರ್ಸ್ ಅನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಪೇಕ್ಷಿಸುತ್ತಿದ್ದು, ಇಲ್ಲಿನ ಆ ಕೋರ್ಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ದೂರದ ಧಾರವಾಡ ಹಾಗೂ ಇತರ ಪಟ್ಟಣಗಳಿಗೆ ಹೋಗಬೇಕಾಗಿತ್ತು. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಇದೇ ವರ್ಷದಿಂದ ಅನ್ವಯವಾಗುವಂತೆ ಬಿಸಿಎ ಕೋರ್ಸ್ ನ್ನು ಪ್ರಾರಂಭಿಸಬೇಕೆಂದು ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರಿಗೆ ಶಾಸಕ ಆರ್.ವಿ. ದೇಶಪಾಂಡೆ ಮನವಿ ಮಾಡಿದ್ದರು. ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಕೋರ್ಸ್ ಪ್ರಾರಂಭಿಸಲು ಅವರು ಮೌಖಿಕ ಒಪ್ಪಿಗೆ ನೀಡಿದ್ದಾರೆ. ಹಳಿಯಾಳಕ್ಕೆ 60 ಮತ್ತು ದಾಂಡೇಲಿಗೆ 40 ಸೀಟುಗಳನ್ನು ಪಡೆಯಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net