ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯ

7-HLY-1 RVD
Published on

ಹಳಿಯಾಳ: ಮಕ್ಕಳ ಭವಿಷ್ಯ ರೂಪಿಸಲಿರುವ ಶಾಲೆಗಳಿಗೆ ಹೆಚ್ಚಿನ ಪ್ರಾಮುಖ್ಯ, ಪ್ರೋತ್ಸಾಹ ನೀಡಲಾಗುತ್ತಿದೆ. ಸೌಲಭ್ಯ ಕಲ್ಪಿಸಲು ಸರ್ಕಾರದ ಜತೆಗೆ ಸಮುದಾಯವೂ ಕೈ ಜೋಡಿಸಿದರೆ ಮಕ್ಕಳ ಭವಿಷ್ಯ ಉಜ್ವಲವಾಗಲಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ತಾಲೂಕಿನ ಜನಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಆಶ್ರಯದಲ್ಲಿ 2022-23ನೇ ಸಾಲಿನ ವಿವೇಕ ಯೋಜನೆಯಡಿ 13.90 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕೊಠಡಿಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ತಹಸೀಲ್ದಾರ್ ಜಿ.ಕೆ. ರತ್ನಾಕರ, ಬಿಇಒ ಪ್ರಮೋದ ಮಹಾಲೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪಾಟೀಲ, ತಾಪಂ ಇಒ ಪರಶುರಾಮ ಘಸ್ತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net