

ಕುಶಾಲನಗರ:
ಸರ್ಕಾರದ ಜತೆಗೆ ಸೇವಾ ಸಂಸ್ಥೆಗಳು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿ ಉಳಿಸಿ ಬೆಳೆÀಸಬಹುದು ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಹೇಳಿದರು. ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜನ ಫ್ರೌಢಶಾಲೆ ಆವರಣದಲ್ಲಿ ಬಿ.ಎಸ್.ಇ. ಸಂಸ್ಥೆಯ ಸಿ.ಎಸ್.ಆರ್. ಫಂಡ್ ನಿಂದ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಿವಿಧೋದ್ದೇಶ ಸಭಾಂಗಣದ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಸಂಘ-ಸAಸ್ಥೆಗಳ ಪ್ರೋತ್ಸಾಹ, ಸಹಕಾರ ಸಿಗುವುದರಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದುತ್ತವೆ.
ಸರ್ಕಾರಿ ಶಾಲೆಗಳ ಉನ್ನತೀಕರಣ ಕಾರ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವ ಅಗತ್ಯ. ಈ ನಿಟ್ಟಿನಲ್ಲಿ ಸಿ.ಎಸ್.ಆರ್ ಫಂಡ್ ನಿಂದ ಶಾಲೆಗಳ ಉನ್ನತೀಕರಣ ಕಾರ್ಯಕ್ಕೆ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.
ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಅಧ್ಯಕ್ಷ ಎಸ್.ಕೆ. ಸತೀಶ್ ಮಾತನಾಡಿ, ಹಳೇ ವಿದ್ಯಾರ್ಥಿಗಳು, ಖಾಸಗಿ ವ್ಯಕ್ತಿಗಳು, ಕಾರ್ಪೊರೇಟ್ ಕಂಪನಿಗಳು, ಸರ್ಕಾರೇತರ ಸಂಸ್ಥೆಗಳು ಸÀರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೊಡುಗೆ ನೀಡಲು ಮುಂದಾಗುತ್ತಿರುವುದು ಉತ್ತಮ ಬೆಳವಣಿಗೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದಾಗಬೇಕು ಎಂದರು.
ಈ ಸಂದರ್ಭ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಹಳೇ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷ ವಿ.ಎಸ್. ಆನಂದ್ ಕುಮಾರ್, ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಆದಂ, ಶಾಲೆಯ ಉಪ ಪ್ರಾಂಶುಪಾಲ ಪರಮೇಶ್ವರಪ್ಪ, ಸಹ ಶಿಕ್ಷಕರಾದ ಎ.ಸಿ. ಮಂಜುನಾಥ್, ದಿನೇಶ್, ಗುತ್ತಿಗೆದಾರಾದ ಶೀಬು ಮತ್ತಿತರರು ಇದ್ದರು.