ಹಳ್ಳಾಡಿ ಕೃಷ್ಣ ನಾಯ್ಕಗೆ ರಾಜ್ಯೋತ್ಸವ ಪ್ರಶಸ್ತಿ

krishna
Published on

ಕೋಟ: ಕಾರ್ತಟ್ಟು ಶ್ರೀ ಅಘೋರೇಶ್ವರ ಕಲಾರಂಗದ ವತಿಯಿಂದ ಪ್ರತಿವರ್ಷ ನೀಡಲಾಗುವ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಹಿರಿಯ ಯಕ್ಷಗಾನ ಕಲಾವಿದ ಹಳ್ಳಾಡಿ ಕೃಷ್ಣ ನಾಯ್ಕ ಆಯ್ಕೆಯಾಗಿದ್ದಾರೆ. 23ರಂದು ಅಘೋರೇಶ್ವರ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಹಾಗೂ ಕೃಷಿಕರಿಗೆ ಸನ್ಮಾನ ನಡೆಯಲಿದೆ. ಸಂಜೆಯ ಸಭಾ ಕಾರ‌್ಯಕ್ರಮದಲ್ಲಿ ಯಕ್ಷವಿಮರ್ಶಕ ಎಸ್.ವಿ ಉದುಕುಮಾರ ಮಣಿಪಾಲ ಪ್ರಶಸ್ತಿ ಪ್ರದಾನಿಸಲಿದ್ದಾರೆ. ಬಳಿಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾರ್ಕಡ ತಾರನಾಥ ಹೊಳ್ಳ, ರಾಷ್ಟ್ರೀಯ ಕ್ರೀಡಾಪಟು ತೃಪ್ತಿ ಅವರನ್ನು ಗುರುತಿಸಿ ಗೌರವಿಸಲಾಗುತ್ತದೆ. ಕಿದಿಯೂರು ಉದಯ ಕುಮಾರ್ ಶೆಟ್ಟಿ, ಮುಳುಗು ತಜ್ಞ ಈಶ್ವರ ಮಲ್ಪೆ, ಸಾಲಿಗ್ರಾಮ ಪಪಂ ಅಧ್ಯಕ್ಷೆ ಸುಕನ್ಯಾ ಜಗದೀಶ್ ಮೊದಲಾದವರು ಭಾಗವಹಿಸಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ‌್ಯಕ್ರಮ ನಡೆಯಲಿವೆ ಎಂದು ಸಂಘದ ಅಧ್ಯಕ್ಷ ಉಮೇಶ್ ನಾಯರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net