ಕನಿಷ್ಠ ವೇತನಕ್ಕಾಗಿ ಹಮಾಲಿ ಕಾರ್ಮಿಕರ ಪ್ರತಿಭಟನೆ

IMG_20231121_212832_311.jpg
Published on

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಅಸಂಟಿತ ಕಾಮಿರ್ಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಬೇಕು. ಮಂಡಳಿಯನ್ನು ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಿರ್ಕರ ಕಲ್ಯಾಣ ಮಂಡಳಿಯ ರೀತಿಯಲ್ಲಿ ಆಥಿರ್ಕ ಸಂಪನ್ಮೂಲಗಳನ್ನು ಕ್ರೋಢಿಕರಿಸಿ ಅಭಿವೃದ್ಧಿ ಪಡಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಎಪಿಎಂಸಿ ಹಮಾಲಿ ಕಾಮಿರ್ಕರ ಒಕ್ಕೂಟ ಹಾಗೂ ವಿವಿಧ ಸಂಟನೆಗಳ ಆಶ್ರಯದಲ್ಲಿ ನಗರದ ತಾಲೂಕು ಆಡಳಿತ ಕಚೇರಿ ಎದುರು ಜಮಾಯಿಸಿದ ಕಾಮಿರ್ಕರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಎಪಿಎಂಸಿಗಳಲ್ಲಿ ಲೈಸನ್ಸ್ ಪಡೆದು ಕೆಲಸ ನಿರ್ವಹಿಸುವ 60 ವರ್ಷ ಪೂರೈಸಿದ ಹಮಾಲಿ ಕಾಮಿರ್ಕರಿಗೆ ಒಂದು ಬಾರಿ ಕನಿಷ್ಠ ಒಂದು ಲ ರೂ. ನಿವತ್ತಿ ಪರಿಹಾರ ನೀಡಬೇಕು. ಲೋಡಿಂಗ್ ಅನ್ಲೋಡಿಂಗ್ ಉದ್ದಿಮೆಗೆ ಕನಿಷ್ಠ ವೇತನ ಜಾರಿ ಮಾಡಬೇಕು. ವಿವಿಧ ವಸತಿ ಯೋಜನೆಗಳನ್ನು ಬಳಸಿಕೊಂಡು ಹಮಾಲಿ ಕಾಮಿರ್ಕರಿಗೆ ವಸತಿ ಯೋಜನೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ನೇತೃತ್ವದ ಹುಬ್ಬಳ್ಳಿ ಎಪಿಎಂಸಿ ಹಮಾಲಿ ಕಾಮಿರ್ಕರ ಒಕ್ಕೂಟದಿಂದ ತಹಸೀಲ್ದಾರ್ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಹಮಾಲಿ ಕಾಮಿರ್ಕರ ಫೆಡರೇಶನ್ ಪ್ರಧಾನ ಕಾರ್ಯದಶಿರ್ ಮಹೇಶ ಪತ್ತಾರ, ಒಕ್ಕೂಟದ ಅಧ್ಯ ಬಸವಣ್ಣೆಪ್ಪ ನೀರಲಗಿ, ಪ್ರಧಾನ ಕಾರ್ಯದಶಿರ್ ಗುರುಸಿದ್ದಪ್ಪ ಅಂಬಿಗೇರ, ಮುಖಂಡರಾದ ಕರಿಯಪ್ಪ ದಳವಾಯಿ, ಹುಸೇನಸಾಬ ನಧಾಪ್, ಮಂಜುನಾಥ ಹುಜರಾತಿ, ಹನಮಂತ ಅಂಬಿಗೇರ, ಮೊಹ್ಮದರಫೀಕ್ ಮುಳಗುಂದ, ಗಾಳೆಪ್ಪ ಮುತ್ಯಾಳ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net