ಹಮಿದೊದ್ದೀನ್ ಅಧ್ಯಕ್ಷ ಶಿವಪ್ಪ ಗಸ್ತಿ ಉಪಾಧ್ಯಕ್ಷ

2
ಕುಡಚಿ ಪುರಸಭೆಯ ನೂತನ ಅಧ್ಯಕ್ಷ ಹಮಿದೋದ್ದೀನ್ ರೋಹಿಲೆ, ಉಪಾಧ್ಯಕ್ಷ ಶಿವಪ್ಪ ಗಸ್ತಿ ಅವರನ್ನು ಸತ್ಕರಿಸಲಾಯಿತು. ಶಾಸಕ ಮಹೇಂದ್ರ ತಮ್ಮಣ್ಣನವರ, ತಹಸೀಲ್ದಾರ್ ಸುರೇಶ ಮುಂಜೆ ಇದ್ದರು.
Published on

ಕುಡಚಿ: ಇಲ್ಲಿನ ಪುರಸಭೆಯ ಎರಡನೆ ಅವಧಿಗೆ ಅಧ್ಯಕ್ಷರಾಗಿ ಹಮಿದೊದ್ದೀನ್ ರೋಹಿಲೆ, ಉಪಾಧ್ಯಕ್ಷರಾಗಿ ಶಿವಪ್ಪ ಗಸ್ತಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ತಹಸೀಲ್ದಾರ್ ಸುರೇಶ ಮುಂಜೆ ಪ್ರಕಟಿಸಿದರು.

ಕುಡಚಿ ಪುರಸಭೆ ಕಚೇರಿಯಲ್ಲಿ ಸೋಮವಾರ ಜರುಗಿದ ಚುನಾವಣೆ ಪ್ರಕ್ರಿಯೆಯಲ್ಲಿ ಎರಡೂ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆಯಾಯಿತು. ಅಧ್ಯಕ್ಷೆ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿತ್ತು.

ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನು ಸತ್ಕರಿಸಿ, ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿದರು. ಪುರಸಭೆ ಸದಸ್ಯರು, ಪುರಸಭೆ ಮುಖ್ಯಾಧಿಕಾರಿ ಬಾಬಾಸಾಹೇಬ ಮಾನೆ, ಗಣ್ಯರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net