ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಲು ಹಲವು ಮಠಾಧೀಶರು ಒತ್ತಾಯ

Hampanagouda Badarli
ಹಂಪನಗೌಡ ಬಾದರ್ಲಿ.
Published on

ರಾಯಚೂರು: ಪ್ರಾದೇಶಿಕ ಅಸಮಾನತೆ ನಿವಾರಣೆ ದೃಷ್ಟಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲೆಯ ಹಲವು ಮಠಾಧೀಶರು ಒತ್ತಾಯಿಸಿದರು.

ಸ್ಥಳೀಯ ಕಿಲ್ಲೆ ಬೃಹನ್ಮಠದಲ್ಲಿ ಬಿಚ್ಚಾಲಿಯ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ಮಠಾಧೀಶರು, ಡಾ.ಡಿ.ಎಂ.ನಂಜುಂಡಪ್ಪ ಸಮಿತಿ ವರದಿಯ ಶಿಫಾರಸಿನಂತೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಲು ಈ ಭಾಗದವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಕಲ್ಯಾಣ ಕರ್ನಾಟಕ ಎಂದರೆ ಕೇವಲ ಕಲಬುರಗಿ ಎನ್ನುವಂತಾಗಿದ್ದು, ಹಲವು ವರ್ಷಗಳಿಂದ ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾಗಿದೆ. ಪ್ರಸಕ್ತ ಸರ್ಕಾರದಲ್ಲಿ ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ರಾಜಕೀಯ ಸ್ಥಾನಮಾನ ನೀಡುವುದು ಅಗತ್ಯವಾಗಿದೆ. ರಾಜ್ಯದ ಜನತೆ ಬಹುಮತದ ಸರ್ಕಾರ ಆಯ್ಕೆ ಮಾಡಿದ್ದು, ಈಶ್ವರ ಖಂಡ್ರೆಗೆ ಡಿಸಿಎಂ ಹಾಗೂ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಬೇಕು ಎಂದರು.

ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಮಂಗಳವಾರಪೇಟೆ ಹಿರೇಮಠದ ವೀರ ಸಂಗಮೇಶ್ವರ ಸ್ವಾಮೀಜಿ, ಸುಲ್ತಾನಪುರದ ಶಂಭು ಸೋಮನಾಥ ಸ್ವಾಮೀಜಿ, ದೇವರಗುಡ್ಡದ ಗಿರಿ ಮಲ್ಲೇಶ್ವರ ಸ್ವಾಮೀಜಿ, ಅಂಕುಶದೊಡ್ಡಿಯ ವಾಮದೇವ ಶಿವಾಚಾರ್ಯ ಸ್ವಾಮೀಜಿ, ಯದ್ದಲದೊಡ್ಡಿ ಮಹಾಲಿಂಗ ಸ್ವಾಮೀಜಿ, ಅಡವಿ ಅಮರೇಶ್ವರದ ತೋಂಟದಾರ್ಯ ಸ್ವಾಮೀಜಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net