

ಹೊಸಪೇಟೆ: ಹಂಪಿ ವಿಶ್ವ ಪರಂಪರೆ ಪ್ರಾಧಿಕಾರದ ವ್ಯಾಪ್ತಿಯ ಹಳ್ಳಿ ಜನರ ಸಮಸ್ಯೆಗೆ ಸಂಬAಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಡಳಿತದ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.
ಈ ಕುರಿತು ಮಾಜಿ ಸಂಸದ ಹಾಗೂ ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ವಿ.ಎಸ್.ಉಗ್ರಪ್ಪ ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಹಂಪಿ ಜನರ ಸ್ಥಿತಿಗತಿಯನ್ನು ವಿವರಿಸಿದರು. ಕೋರ್ಟ್ ಆದೇಶದ ನೆಪದಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ೩೦ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಹಂಪಿ ವೀಕ್ಷಣೆಗೆ ಬರುವ ದೇಶ- ವಿದೇಶಿ ಪ್ರವಾಸಿಗರಿಗೆ ಕುಡಿಯಲು ಕೂಲ್‌ಡ್ರಿಂಕ್ಸ್ ಕೂಡಾ ದೊರೆಯುತ್ತಿಲ್ಲ. ಊಟೋಪಚಾರಕ್ಕೆ ಹೊಸಪೇಟೆಗೆ ಬರುವ ಅನಿವಾರ್ಯತೆ ಸೃಷ್ಟಿಸಲಾಗಿದೆ.
ಪರಿಣಾಮ ಹಂಪಿ, ಕಡ್ಡಿರಾಂಪುರ, ಕಮಲಾಪುರ ಹಾಗೂ ಗಂಗಾವತಿ ಭಾಗದ ಹತ್ತಾರು ಹಳ್ಳಿ ಜನರು ನಂಬಿಕೊAಡಿದ್ದ ಹೋಂ ಸ್ಟೇಗಳು ಬಾಗಿಲು ಮುಚ್ಚಿವೆ. ಇತರೆ ವ್ಯಾಪಾರವನ್ನೂ ನಿರ್ಬಂಧಿಸಿದ್ದರಿAದ ೧೦ ಸಾವಿರಕ್ಕೂ ಹೆಚ್ಚು ಕುಟುಂಬಗಳು ಉದ್ಯೋಗವಿಲ್ಲದೇ ಬೀದಿಗೆ ಬರುವಂತಾಗಿದೆ ಎಂದು ದೂರಿದರು.
ಇದರಿಂದ ಅಸಮಾಧಾನಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಕರೆ ಮಾಡಿ ಹಂಪಿ ಜನರ ಸ್ಥಿತಿಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಹಂಪಿ ಜನರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಮೂಲಕ ಕೋರ್ಟ್ಗೆ ಮಾಹಿತಿ ಒದಗಿಸುವಂತೆ ನಿರ್ದೇಶಿಸಿದರು. ಅಲ್ಲದೇ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್‌ಗೂ ಕರೆ ಮಾಡಿ ಹಂಪಿಯಲ್ಲಿ ಉಂಟಾಗಿರುವ ವಿವಾದ ಕುರಿತು ತಮ್ಮ ಗಮನಕ್ಕೆ ಏಕೆ ತಂದಿಲ್ಲವೆAದು ಪ್ರಶ್ನಿಸಿದರು ಎಂದು ವಿ.ಎಸ್.ಉಗ್ರಪ್ಪ ಅವರ ಆಪ್ತ ಮೂಲಗಳು ತಿಳಿಸಿವೆ.