ಫೆ.28ರಿಂದ ಹಂಪಿ ಉತ್ಸವ ಸಿಎಂ ಒಪ್ಪಿಗೆ

HAMPI
HAMPI
Published on

ಹೊಸಪೇಟೆ: ಈ ಬಾರಿಯ ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಸಲು ಬೆಂಗಳೂರಿನಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಸಮ್ಮತಿ ಪಡೆದಿದ್ದಾರೆ. ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದಾರೆ.

ಮಾ.01 ಮತ್ತು 02 ರಂದು ಕಾರ್ಯಕ್ರಮ ನಡೆಯಲಿದೆ. ಮಾ.02 ರಂದು ಸಮಾರೋಪ ಕೂಡ ನಡೆಯಲಿದೆ. ಹಂಪಿ ಉತ್ಸವ ಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರಗೆ ಉಸ್ತುವಾರಿ ಸಚಿವ ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net