ಉತ್ಸವದ ಯಶಸ್ವಿಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸ್ವಾಗತ ಮತ್ತು ಶಿಷ್ಠಾಚಾರ ಹಾಗೂ ಕಲಾವಿದರ ಆಯ್ಕೆ ಸಮಿತಿ ರಚನೆ ಮಾಡಲಾಗಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿ ನೇತೃತ್ವದಲ್ಲಿ ಸಾರಿಗೆ ಸಮಿತಿ, ಹೊಸಪೇಟೆ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರ ಅಧ್ಯಕ್ಷತೆಯಲ್ಲಿ ವಸತಿ ಹಾಗೂ ಧ್ವನಿ ಬೆಳಕು ಕಾರ್ಯಕ್ರಮ ಸಮಿತಿ, ಆಹಾರ ಇಲಾಖೆ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಆಹಾರ ಸಮಿತಿ, ವಾರ್ತಾ ಇಲಾಖೆ ಹಿರಿಯ ಸಹಾಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಪ್ರಚಾರ, ಜಾಹಿರಾತು ಮತ್ತು ಮಾಧ್ಯಮ ಸಮಿತಿ, ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಣಕಾಸು, ಆಹ್ವಾನ ಪತ್ರಿಕೆ, ಕರಪತ್ರ, ನೆನಪಿನ ಕಾಣಿಕೆ, ಪಾಸು, ಪ್ರಮಾಣ ಪತ್ರ, ಬ್ಯಾನರ್ ಹಾಗೂ ವೇದಿಕೆಗಳ ಸಮಿತಿ, ಜಿ.ಪಂ.ಉಪ ಕಾರ್ಯದರ್ಶಿಗಳ ಅಧ್ಯಕ್ಷತೆ ಮೂಲಭೂತ ಸೌಲಭ್ಯ ಹಾಗೂ ಕುಡಿವ ನೀರಿನ ವ್ಯವಸ್ಥೆ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ನೈರ್ಮಲೀಕರಣ ಸಮಿತಿ, ಪೊಲೀಸ್ ವರಿಷ್ಠಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾನೂನು ಸುವ್ಯವಸ್ಥೆ ಸಮಿತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಪ್ರದರ್ಶನ ಸಮಿತಿ, ಹಡಗಲಿ ತಾಲೂಕು ಪಂಚಾಯತಿ ಇಒ ಅಧ್ಯಕ್ಷತೆಯಲ್ಲಿ ಕ್ರೀಡಾ ಸಮಿತಿ, ಪ್ರವಾಸೋದ್ಯಮ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಾನಪದ ವಾಹಿನಿ, ಶೋಭಾಯಾತ್ರೆ, ತುಂಗಾರತಿ, ವಸಂತ ವೈಭವ ಕಾರ್ಯಕ್ರಮಗಳು ಹಾಗೂ ಹಂಪಿ ಬೈಸ್ಕೈ ಸಮಿತಿ, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಗ್ನಿಶಾಮಕ ವ್ಯವಸ್ಥೆ ಸಮಿತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಪುಸ್ತಕ ಪ್ರದರ್ಶನ, ವಿಚಾರ ಸಂಕಿರಣ, ಕವಿಗೋಷ್ಠಿ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಧ್ಯಕ್ಷತೆಯಲ್ಲಿ ಶಾಲಾ ಮಕ್ಕಳ ನೃತ್ಯ, ಚಿತ್ರಕಲಾ, ಪ್ರಬಂದ ಸ್ಪರ್ಧೆ ಆಯೋಜನೆ ಸಮಿತಿಗಳನ್ನು ರಚಿಸಲಾಗಿದೆ.