ಹಂಪಿ ಉತ್ಸವಕ್ಕೆ ಅಧಿಕಾರಿಗಳು ಉತ್ಸುಕರಾಗಿ

unnamed
Published on

ಹೊಸಪೇಟೆ: ಫೆಬ್ರವರಿ  28 ರಿಂದ ಮೂರು ದಿನಗಳ ಕಾಲ ನಡೆಯುವ ಹಂಪಿ ಉತ್ಸವವನ್ನು ವಿಶೇಷವಾಗಿ ಆಚರಿಸಲು ಅಧಿಕಾರಿಗಳು ಉತ್ಸುಕರಾಗಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ನಡೆದ ಹಂಪಿ ಉತ್ಸವದ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿದರು.

ಹಿಂದಿನ ಉತ್ಸವದಲ್ಲಿ ಸುಮಾರು 5 ಲಕ್ಷ ಕ್ಕೂ ಹೆಚ್ಚು ಜನರು ವೀಕ್ಷಣೆ  ಮಾಡಿದ್ದರು. ಆದಾಗ್ಯೂ ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಕೈಗೊಂಡು ಜಿಲ್ಲಾಡಳಿತ ಯಶಸ್ವಿಯಾಗಿ ಆಚರಣೆಗೆ ಕ್ರಮ ವಹಿಸಲಾಗಿತ್ತು. ಆದರೆ ಈ ಬಾರಿ ಇನ್ನಷ್ಟು ವಿಶೇಷವಾಗಿ ಇಡೀ ರಾಜ್ಯದ ಜನತೆಯನ್ನು ಆಕರ್ಷಿಸುವ ನಿಟ್ಟಿನಲ್ಲಿ ಪೂರ್ವತಯಾರಿ ನಡೆಸಲು ಅಧಿಕಾರಿಗಳ ಮತ್ತು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕಿದೆ. ಅಧಿಕಾರಿಗಳು ಉತ್ಸುಕತೆಯಿಂದ ಕಾರ್ಯನಿರ್ವಹಿಸಲು ಸಜ್ಜಾಗಬೇಕು. ಈ ಬಾರಿಯ ಸಮಿತಿಗಳನ್ನು ಶೀಘ್ರವೇ ರಚಿಸಿ ಕಾರ್ಯೋನ್ಮುಖರಾಗಬೇಕು. ಸಮಿತಿಗಳು ಸ್ವತಂತ್ರವಾಗಿ ಹೊಣೆಗಾರಿಕೆಯನ್ನು ವಹಿಸಿಕೊಂಡು ಯಶಸ್ವಿ ಆಚರಣೆಗೆ ಸಿದ್ದತೆ ಕೈಗೊಳ್ಳಬೇಕು ಎಂದರು.

ಜಿಪಂ ಸಿಇಒ ನೋಂಗ್ಜಾಯ ಮೋಹಮ್ಮದ್ ಅಲಿ ಅಕ್ರಮ್ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net