ಹಂಪಿ ಉತ್ಸವ ಲೋಗೋ ಬಿಡುಗಡೆ

27 MANJU 05
Published on

ಹೊಸಪೇಟೆ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ವಿಶ್ವವಿಖ್ಯಾತ ಹಂಪಿ ಉತ್ಸವ ಫೆ.28 ರಿಂದ ಮಾ.01 ಮತ್ತು 2 ರಂದು ಜರುಗಲಿರುವ ಹಂಪಿ ಉತ್ಸವದ ಲೋಗೋವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್.ಜಮೀರ್ ಅಹ್ಮದ್ ಖಾನ್ ಬಿಡುಗಡೆಗೊಳಿಸಿದರು.

ಬಳಿಕ ಅವರು ಮಾತನಾಡಿ, ಹಿಂದಿನ ವರ್ಷ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಮಾಧ್ಯಮ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಉತ್ಸವ ನಡೆಸಲಾಯಿತು. ಈ ಬಾರಿ ಇನ್ನಷ್ಟು ವಿಜೃಂಭಣೆಯಿAದ ಇಡೀ ರಾಜ್ಯದ ಗಮನಸೆಳೆವ ನಿಟ್ಟಿನಲ್ಲಿ ಹಂಪಿ ಉತ್ಸವ ಆಯೋಜಿಸಲು ನಿಮ್ಮೆಲ್ಲರ ಸಹಕಾರವಿರಲಿ. ಹಂಪಿ ಉತ್ಸವ ಮನೆ ಹಬ್ಬದಂತೆ ಆಚರಣೆಯಂತೆ ಆಗಲಿ. ಉತ್ಸವದ ಎಲ್ಲಾ ಕೆಲಸಗಳಲ್ಲಿ ಅಧಿಕಾರಿಗಳ ಆಸಕ್ತಿಯಿಂದ ಭಾಗವಹಿಸುವಂತೆ ತಿಳಿಸಿದರು.

ಶಾಸಕರಾದ ಎಚ್.ಆರ್.ಗವಿಯಪ್ಪ, ಡಾ;ಎನ್.ಟಿ.ಶ್ರೀನಿವಾಸ್, ಕೆ.ನೇಮಿರಾಜನಾಯ್ಕ, ಲತಾ ಮಲ್ಲಿಕಾರ್ಜುನ, ಕೃಷ್ಣನಾಯ್ಕ, ಜಿಪಂ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಎಎಸ್ಪಿ ಸಲೀಂ ಪಾಷಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net