ಹಂಪಿ ಸ್ಮಾರಕಗಳಿಗೂ ತ್ರಿವರ್ಣ ಬೆಳಕಿನ ಮೆರುಗು; ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂಭ್ರಮ..

Hampi 1
Published on

ಹೊಸಪೇಟೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹೊಸಪೇಟೆ ತಾಲೂಕಿನ ವಿಶ್ವವಿಖ್ಯಾತ ಹಂಪಿಯ ಐತಿಹಾಸಿಕ ಸ್ಮಾರಕಗಳು ತ್ರಿವರ್ಣ ಬೆಳಕಿನ ‌ಚಿತ್ತಾರದಲ್ಲಿ ಕಂಗೊಳಿಸಲಾರಂಭಿಸಿವೆ.

ಹಂಪಿಯ ವಿರೂಪಾಕ್ಷ ದೇವಸ್ಥಾನ, ವಿಜಯ ವಿಠ್ಠಲ ದೇಗುಲದ ಪ್ರಾಂಗಣದಲ್ಲಿರುವ ಕಲ್ಲಿನ ತೇರು, ಸಂಗೀತವನ್ನು ಹೊರಹೊಮ್ಮಿಸುವ ಸಪ್ತಸ್ವರ ಮಂಟಪ, ಕಡಲೆ ಕಾಳು ಗಣಪ, ಸಾಸಿವೆ ಕಾಳು ಗಣಪ, ಸೇರಿದಂತೆ ನಾನಾ ಸ್ಮಾರಕಗಳಿಗೆ ತ್ರಿವರ್ಣದ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಆ.5 ರಿಂದ 15ರ ವರೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ವ್ಯಾಪ್ತಿಯ ಐತಿಹಾಸಿಕ‌ ದೇಗುಲ, ಸ್ಮಾರಕ ಹಾಗೂ ವಸ್ತು ಸಂಗ್ರಹಾಲಯಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇದರ ಬೆನ್ನಲ್ಲೇ ಭಾನುವಾರ ಹಂಪಿಯ ಐತಿಹಾಸಿಕ‌ ಸ್ಮಾರಕಗಳಿಗೆ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳ ವಿದ್ಯುತ್ ದೀಪದ ಬೆಳಕಿನ ವ್ಯವಸ್ಥೆ ಮಾಡಿರುವುದು ಮೆರಗು‌ ತಂದಿದೆ.‌

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net