

ಹೊಸಪೇಟೆ: ವಿಶ್ವ ವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಎರಡನೇ ಶನಿವಾರ ಹಾಗೂ ಭಾನುವಾರ ವೀಕೆಂಡ್ ಹಿನ್ನೆಲೆಯಲ್ಲಿ ಹಂಪಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು.
ಜಿ- 20 ಶೃಂಗಸಭೆ ಬಳಿಕ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಅದರಲ್ಲೂ ವೀಕೆಂಡ್ ಬಂದರೆ ಸಾಕು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅದರಲ್ಲೂ ಬೆಂಗಳೂರಿನಿAದ ಟೆಕ್ಕಿಗಳ ದಂಡೇ ಹರಿದುಬರುತ್ತಿದ್ದು, ಹಂಪಿಯ ಐತಿಹಾಸಿಕ ಸ್ಮಾರಕಗಳನ್ನು ಕಂಡು ಸಂತಸಗೊಳ್ಳುತ್ತಿದ್ದಾರೆ. ಈ ಸ್ಮಾರಕಗಳನ್ನು ಮುಂದಿನ ಪೀಳಿಗೆಗೆ ಜತನದಿಂದ ಕಾಪಾಡಿರುವುದನ್ನು ಕಂಡು ಪ್ರವಾಸಿಗರು ಇನ್ನಷ್ಟು ಪುಳಕಿತಗೊಳ್ಳುತ್ತಿದ್ದಾರೆ.
ಹಂಪಿಯ ವಿರೂಪಾಕ್ಷೇಶ್ವರ ದೇಗುಲ, ವಿಜಯ ವಿಠ್ಠಲ ದೇಗುಲ, ಕಲ್ಲಿನತೇರು, ಪುರಂದರದಾಸರ ಮಂಟಪ, ಕಮಲ ಮಹಲ್, ಮಹಾನವಮಿ ದಿಬ್ಬ, ಹಜಾರರಾಮ ದೇಗುಲ, ಕಡಲೆ ಕಾಳು, ಸಾಸಿವೆ ಕಾಳು ಗಣಪತಿ ಮಂಟಪಗಳು, ಮಾಲ್ಯವಂತ ರಘುನಾಥ ದೇಗುಲ ಸೇರಿದಂತೆ ವಿವಿಧ ಸ್ಮಾರಕಗಳು ಹಾಗೂ ಬಜಾರ್‌ಗಳನ್ನು ಪ್ರವಾಸಿಗರು ವೀಕ್ಷಿಸಿದರು.
ರಾಜ್ಯ ಸೇರಿದಂತೆ ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ, ದಿಲ್ಲಿ, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ಪ್ರವಾಸಿಗರು ಹಂಪಿ ವೀಕ್ಷಣೆಗೆ ಆಗಮಿಸಿದ್ದಾರೆ.
ಕೊರೋನಾ ಈಗ ಆರಂಭಗೊAಡಿದ್ದು, ಹಂಪಿಯಲ್ಲಿ ಪ್ರವಾಸೋದ್ಯಮಕ್ಕೆ ಯಾವುದೇ ನಿರ್ಬಂಧ ಹಾಕಲಾಗಿಲ್ಲ. ಹಾಗಾಗಿ ಪ್ರವಾಸಿಗರು ಕೂಡ ಸಂತಸದಿAದಲೇ ಆಗಮಿಸಿ ಹಂಪಿ ಸ್ಮಾರಕಗಳನ್ನು ವೀಕ್ಷಿಸುತ್ತಿದ್ದಾರೆ.