ಜ್ಞಾನಾರ್ಜನೆಯಿಂದ ಭವಿಷ್ಯ ಉಜ್ವಲ

hanbe vidyarti mitra
Published on

ಕರವೇ ಕನ್ನಡಿಗರ ಬಣದ ಅಧ್ಯಕ್ಷ ಬಿ.ಎಸ್ ಚಂದ್ರಶೇಖರ್ ಅನಿಸಿಕೆ

ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ವಿತರಣೆ


ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ ಜ್ಞಾನಾರ್ಜನೆಗೆ ಆದ್ಯತೆ ನೀಡಿದರೆ ಭವಿಷ್ಯದಲ್ಲಿ ಯಶಸ್ಸು ನಮ್ಮದಾಗಲಿದೆ ಎಂದು ಕರವೇ ಕನ್ನಡಿಗರ ಬಣದ ಅಧ್ಯಕ್ಷ ಬಿ.ಎಸ್. ಚಂದ್ರಶೇಖರ್ ತಿಳಿಸಿದರು.
ತಾಲೂಕಿನ ಹಣಬೆ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಸಂಚಿಕೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡರೆ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ದಿನಪತ್ರಿಕೆ, ಮಾಸ ಪತ್ರಿಕೆ, ಕನ್ನಡ ಪುಸ್ತಕ ಓದುವುದನ್ನು ರೂಢಿಸಿಕೊಂಡು ಹೊರ ಜಗತ್ತಿನ ಪ್ರತಿಯೊಂದು ಘಟನಾವಳಿಗಳ ಬಗ್ಗೆಯೂ ಗಮನಹರಿಸಬೇಕು ಎಂದರು.
ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆಯುವ ವಿದ್ಯಾರ್ಥಿಗಳಿಗೆ ಸಂಘಟನೆಯಿಂದ ಪ್ರತಿವರ್ಷ ಸನ್ಮಾನಿಸಿ ಪ್ರೋತ್ಸಾಹಿಸಲಾಗುತ್ತದೆ. ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಪತ್ರಿಕೆ ಓದಿ ಉತ್ತಮ ಲಿತಾಂಶ ಪಡೆಯಬೇಕು. ಅಂತಹ ಸಾಧಕರಿಗೆ ವಿಶೇಷವಾಗಿ ಬಹುಮಾನ ವಿತರಿಸಿ ಸತ್ಕರಿಸಲಾಗುವುದು ಎಂದ ಅವರು, ವಿದ್ಯಾರ್ಥಿ ಮಿತ್ರ ಸಮರ್ಪಕ ಬಳಕೆ ಬಗ್ಗೆ ಶಿಕ್ಷಕರು ಮಕ್ಕಳಿಗೆ ತಿಳಿಹೇಳಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಯಾವುದೇ ಸಹಾಯ ಮಾಡಲು ನಾವು ಸಿದ್ಧ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಂಗಪ್ಪ ಮಾತನಾಡಿ, ಶಿಕ್ಷಣ ಒಂದಿದ್ದರೆ ಜೀವನಲ್ಲಿ ಗೌರವ, ಸ್ಥಾನಮಾನ, ಹೀಗೆ ಎಲ್ಲವೂ ಸಿಗುತ್ತದೆ. ನಿರಂತರ ಅಭ್ಯಾಸದಿಂದ ಮಾತ್ರವೇ ಸಾಧನೆ ಮಾಡಲು ಸಾಧ್ಯ. ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಶೇ.95 ಫಲಿತಾಂಶ ಬಂದಿದೆ. ಈ ಬಾರಿ ಶೇ.100 ಫಲಿತಾಂಶ ತರಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಸಂಜೀವಿನಿಯಾಗಿದೆ ಎಂದರು.
ಸಂಚಿಕೆಯಲ್ಲಿ ಮಕ್ಕಳಿಗೆ ಅಗತ್ಯವಾದ ಸಾಮಾನ್ಯ ಜ್ಞಾನ, ವಿಷಯವಾರು ಮಾಹಿತಿ ಅಭ್ಯಾಸಕ್ಕೆ ಉಪಯುಕ್ತವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗೂ ಈ ಸಂಚಿಕೆ ಅಡಿಪಾಯವಾಗಿದೆ. ಪ್ರತಿದಿನ ಕನಿಷ್ಠ ಅರ್ಧಗಂಟೆಯಾದರೂ ಪತ್ರಿಕೆ ಓದಿಗೆ ಮೀಸಲಿಡಿ. ವಿದ್ಯಾರ್ಥಿ ಜೀವನವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡಿದರೆ ಭವಿಷ್ಯದ ಜೀವನ ಸುಖಕರವಾಗರಲಿದೆ ಎಂದರು.
ಶಾಲಾ ಮುಖ್ಯಶಿಕ್ಷಕಿ ಖಮರ್ ಸುಲ್ತಾನಾ ಮಾತನಾಡಿ, ವಿದ್ಯಾರ್ಥಿ ಉದ್ಯೋಗ ಮಿತ್ರದಂತಹ ಸಂಚಿಕೆ ವಿದ್ಯಾರ್ಥಿಗಳ ಪಾಲಿಗೆ ಜ್ಞಾನ ಭಂಡಾರವಾಗಿದೆ. ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದರು.
ವಿದ್ಯಾರ್ಥಿ ಮಿತ್ರ ವಿತರಣೆಗೆ ಸಹಾಯ ಮಾಡಿದ ಕರವೇ ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ ಮಾತನಾಡಿ, ಒಳ್ಳೆಯದನ್ನು ಮಾಡದಿದ್ದರು ಪರವಾಗಿಲ್ಲ. ಕೆಡುಕು ಮಾಡಬಾರದು. ಜ್ಞಾನರ್ಜನೆಯ ಸಮಯದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net