

ಹಾನಗಲ್ಲ: ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೆರೆಕ್ಯಾತನಹಳ್ಳಿ ತಾಂಡಾದಲ್ಲಿ ಗುರುವಾರ ಸಂಭವಿಸಿದೆ.
ದೇವೇಂದ್ರಪ್ಪ ಹನುಮಂತಪ್ಪ ಲಮಾಣಿ (39) ಮೃತ ರೈತ.
ಈತ ಕೃಷಿಗಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಆದರೆ, ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಮನನೊಂದು ಜಮೀನಿನಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.