ಮೆಕ್ಕೆಜೋಳಕ್ಕೆ ಔಷಧ ಸಿಂಪಡಿಸುತ್ತಿದ್ದ ಕೃಷಿಕ ಹಾವು ಕಡಿದು ಸಾವು

Snake-isolated-768x401
Published on

ಹಾನಗಲ್ಲ: ಮೆಕ್ಕೆಜೋಳ ಬೆಳೆಗೆ ಔಷಧ ಸಿಂಪಡಣೆ ಮಾಡುತ್ತಿದ್ದ ರೈತ ಹಾವು ಕಚ್ಚಿ ಮೃತಪಟ್ಟ ಘಟನೆ ತಾಲೂಕಿನ ಶಂಕರಿಕೊಪ್ಪದಲ್ಲಿ ಸೋಮವಾರ ಸಂಭವಿಸಿದೆ.
ಗ್ರಾಮದ ಶಿವಬಸಪ್ಪ ಮಲ್ಲಪ್ಪ ಮೂಲಿಮನಿ ಮೃತ ರೈತ.
ಈತ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಗೆ ಔಷಧ ಸಿಂಪಡಣೆ ಮಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿದೆ. ಕೂಡಲೇ ಆತನನ್ನು ಹಾನಗಲ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net